ಬೆಂಗಳೂರು: 2021-22 ಸಾಲಿನಲ್ಲಿ ಬೆಂಬಲ ಬೆಲೆಯಡಿ ಕಡಲೆ ಕಾಳನ್ನು ಖರೀದಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ 2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳನ್ನು ಪ್ರತಿ ಕ್ವಿಂಟಾಲ್‌ಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ.5,230 ರಂತೆ ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳ ರೈತರಿಂದ ಖರೀದಿಸಲು ಆದೇಶಿಸಿದೆ.
ರೈತರಿಗೆ ಸಿಹಿ ಸುದ್ದಿ.. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಸರ್ಕಾರ ನಿರ್ಧಾರ - ಹಿಂಗಾರು ಹಂಗಾಮು
2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳಿನ ಬೆಲೆಯನ್ನು ಕೇಂದ್ರ ಸರ್ಕಾರವು ನಿಗದಿಪಡಿಸಿತ್ತು. ಇದೀಗ ರೈತರಿಂದ ಬೆಳೆ ಖರೀದಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರ
ಷರತ್ತುಗಳೇನು?:
- ಈ ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
- ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳನ್ನು ಖರೀದಿಸಬೇಕು.
- ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಂಬಂಧಪಟ್ಟ ಜಿಲ್ಲೆಯಲ್ಲಿ ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳ ಸಂಖ್ಯೆಯನ್ನು ತೆರೆಯಲು ನಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ನಿರ್ಧರಿಸಬೇಕು.
- ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯ DBT ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು.
ಇದನ್ನೂ ಓದಿ:ರಷ್ಯಾ ವಿರುದ್ಧದ ಖಂಡನಾ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ, ಚೀನಾ