ಬೆಂಗಳೂರು: ಪಿಯು ಮೌಲ್ಯಮಾಪಕರಿಗೆ ಸಂಭಾವನೆ ನೀಡದ ಹಿನ್ನೆಲೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ನೂರಾರು ಉಪನ್ಯಾಸಕರು ಬೆಂಗಳೂರು ನಗರದ ಮೌರ್ಯ ಸರ್ಕಲ್ನಲ್ಲಿ ಇಂದು ಪ್ರತಿಭಟನೆ ನಡೆಸಿದ್ರು.
ಕಳೆದ 10 ವರ್ಷಗಳಿಂದ ಹಲವಾರು ಹೋರಾಟ ನಡೆಸುತ್ತ ಬಂದಿದ್ದೇವೆ.. ಹಾಗೆಯೇ ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಮಕ್ಕಳಲ್ಲಿ ಗುಣಾತ್ಮಕ ಹಾಗೂ ಪರಿಣಾಮಾತ್ಮಕ ಬದಲಾವಣೆ ತರುವ ರೂವಾರಿಯಾಗಿದ್ದೇವೆ. ಆದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ 2018-19ನೇ ಸಾಲಿನ ಮೌಲ್ಯಮಾಪನದ ಸಂಭಾವನೆಯನ್ನು ಇದುವರೆಗೆ ಬಿಡುಗಡೆ ಮಾಡಿಲ್ಲ ಅಂತ ಆರೋಪಿಸಿದರು. ಉಪನ್ಯಾಸಕರ ಸಮಸ್ಯೆಗಳ ಪರಿಹಾರಕ್ಕಾಗಿ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಹೀಗಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ ಎದುರಾಗಿದೆ ಅಂತಾ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದರು.