ಕೊರೊನಾ ಭೀತಿ: ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ರದ್ದು - government employees general transfer cancel
ಕೊರೊನಾ ಪರಿಸ್ಥಿತಿ ಹಿನ್ನೆಲೆ 2020-21ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ಆದರೆ ವಿರಳ ಪ್ರಕರಣಗಳಲ್ಲಿ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡಬಹುದು ಎಂದು ತಿಳಿಸಿದೆ.
ಸಾಮಾನ್ಯ ವರ್ಗಾವಣೆಗೆ ತಡೆ ನೀಡಿದ ಸರ್ಕಾರ
ಬೆಂಗಳೂರು: ಕೋವಿಡ್ ಪರಿಸ್ಥಿತಿ ಹಿನ್ನೆಲೆ ಮಿತವ್ಯಯ ಹಾಗೂ ಕೆಲಸಗಳಿಗೆ ಧಕ್ಕೆಯಾಗಬಾರದು ಎಂಬ ಉದ್ದೇಶದಿಂದ 2020-21ನೇ ಸಾಲಿನ ಸಾಮಾನ್ಯ ವರ್ಗಾವಣೆ ಮಾಡುವುದನ್ನು ಕೈ ಬಿಡಲು ಸರ್ಕಾರ ತೀರ್ಮಾನಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ವಿರಳ ಪ್ರಕರಣಗಳಲ್ಲಿ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡಬಹುದು ಎಂದು ತಿಳಿಸಿದೆ. ಸರ್ಕಾರಿ ನೌಕರರ ವರ್ಗಾವಣೆಯನ್ನು ಪ್ರತಿ ವರ್ಷ ಮೇ ಹಾಗೂ ಜೂನ್ ತಿಂಗಳಲ್ಲಿ ಮಾರ್ಗಸೂಚಿಯಂತೆ ಷರತ್ತುಗಳಿಗೆ ಒಳಪಟ್ಟು ಮಾಡಬಹುದಾಗಿತ್ತು. ಆದರೆ ಈಗ ವರ್ಗಾವಣೆ ಮಾಡುವುದನ್ನು ಕೈ ಬಿಡಲು ತೀರ್ಮಾನಿಸಲಾಗಿದೆ.