ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್! - ನಾಲ್ಕು ಭಾನುವಾರ ಲಾಕ್‌ಡೌನ್
ಕರ್ನಾಟಕದಲ್ಲಿ ಜುಲೈ 5 ರಿಂದ ಮುಂದಿನ ನಾಲ್ಕು ಭಾನುವಾರ ಪೂರ್ಣ ದಿನದ ಲಾಕ್‌ಡೌನ್ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಗತ್ಯ ಸರಕು ಸಾಗಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಲಾಗಿದೆ.
ನಾಲ್ಕು ಭಾನುವಾರ ಲಾಕ್‌ಡೌನ್
ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿ ಕೆಲ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ಇದೀಗ ಅಧಿಕೃತ ಆದೇಶವನ್ನು ಸಹ ಹೊರಡಿಸಿದೆ.
ಅದೇ ರೀತಿ ಅಗತ್ಯ ಸೇವೆಗಳನ್ನು ನೀಡುವ ಇಲಾಖೆಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ಸರ್ಕಾರಿ ಇಲಾಖೆಗಳು, ಕಚೇರಿಗಳು, ನಿಗಮ ಮಂಡಳಿಗಳು ಜುಲೈ 10 ರಿಂದ ಆಗಸ್ಟ್ 8ರ ವರೆಗೆ ಎಲ್ಲಾ ಶನಿವಾರ ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ. ಅದೇ ರೀತಿ ರಾತ್ರಿ ಕರ್ಫ್ಯೂ ಅವಧಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿರುವ ಸರ್ಕಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಿದೆ. ಈ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆ ಹೊರತುಪಡಿಸಿ ಜನರ ಚಲನವಲನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.