ಬೆಂಗಳೂರು: ಸರ್ಕಾರದ ವೆಬ್ಸೈಟ್ಗಳು ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವಲ್ಲಿ ಹಿಂದೆ ಉಳಿದಿವೆ. ಸರ್ಕಾರದಲ್ಲಿ ನಾವು ರೂಪಿಸುವ ಪ್ರತಿ ಯೋಜನೆ, ಆಡಳಿತ, ಯಾವ ರೀತಿ ಸುಧಾರಣೆ ತಂದಿದ್ದೇವೆ ಎನ್ನುವ ಮಾಹಿತಿಯನ್ನು ಪಕ್ಷದ ಸಾಮಾಜಿಕ ಜಾಲತಾಣಗಳು ಸಮಗ್ರವಾಗಿ ನೀಡಬೇಕು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಕರೆ ನೀಡಿದರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಹಿಂದೆ ಉಳಿದಿದ್ದೇವೆ. ನಾವು ಕೆಲಸಗಳನ್ನು ಮಾಡುತ್ತಿದ್ದೇವೆ. ಆದರೆ ಮಾಡಿದ ಕೆಲಸಗಳನ್ನು ಜನರಿಗೆ ತಿಳಿಸುತ್ತಿಲ್ಲ. ನಾವು ಏನು ಕೆಲಸ ಮಾಡುತ್ತಿದ್ದೇವೆ ಎನ್ನುವುದನ್ನು ವಿವರವಾಗಿ ಸಮಾಜದ ಜೊತೆ ಹಂಚಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದೇವೆ. ಹಾಗಾಗಿ ಸಮಾಜದಲ್ಲಿ ಈ ಸರ್ಕಾರ ಏನು ಮಾಡುತ್ತಿದೆ, ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಜನರಿಗೆ ಗೊತ್ತಾಗುತ್ತಿಲ್ಲ. ಜನಪರವಾಗಿ ಕೆಲಸವಾಗುತ್ತಿದೆಯೇ ಅಥವಾ ಸ್ವಾರ್ಥಕ್ಕಾಗಿ, ಅಧಿಕಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಜನರಲ್ಲಿ ಕಾಡುತ್ತಿದೆ ಎಂದರು.
ಕಾಂಗ್ರೆಸ್ಗೆ ಹೋಗಲ್ಲವೆಂದು ಪ್ರಮಾಣ ಮಾಡಿ.. ಜೆಡಿಎಸ್ ಶಾಸಕರಿಗೆ ಎನ್.ಆರ್. ಸಂತೋಷ್ ಸವಾಲ್!