ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ಆರ್.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ಭೀತಿ: ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ - Board of Public Education
ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಸೂಚಿಸಿದೆ.
ಕೊರೊನಾ ಭೀತಿ: ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್
ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಎಸ್ಎಸ್ಎಲ್ಸಿ ಮೌಲ್ಯಮಾಪಕರು, ಕೋವಿಡ್ ಕೆಲಸಕ್ಕೆ ನಿಯೋಜಿಸಿದವರನ್ನು ಹೊರತುಪಡಿಸಿ ಉಳಿದವರಿಗೆ ವರ್ಕ್ ಫ್ರಂ ಹೋಂ ಆದೇಶಿಸಲಾಗಿದೆ.
ಇಲಾಖೆಯಿಂದ ಆನ್ಲೈನ್ ಕ್ಲಾಸ್ ನಡೆಸುವ ಯೋಜನೆಯಿದ್ದು, ಇಂತಹ ಸಂದರ್ಭದಲ್ಲಿ ಮನೆಯಿಂದಲೇ ಕರ್ತವ್ಯ ನಿರ್ವಹಿಸಬೇಕು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕೇಂದ್ರ ಸ್ಥಾನ ಬಿಡಬಾರದು ಎಂಬ ನಿಯಮವನ್ನೂ ತಿಳಿಸಲಾಗಿದೆ.