ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ (KFCSC) ಖಾಲಿ ಇರುವ ಒಟ್ಟು 386 ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹುದ್ದೆ ನೇಮಕಾತಿ ಭರ್ತಿಗೆ ಮುಂದಾಗಲಾಗಿದೆ. ವ್ಯವಸ್ಥಾಪಕರು, ಹಿರಿಯ ಮತ್ತು ಕಿರಿಯ ವ್ಯವಸ್ಥಾಪಕರು ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಎಫ್ಸಿಎಸ್ಸಿಯಲ್ಲಿ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳು, ನೇಮಕಾತಿ ವಿಧಾನ ಸೇರಿದಂತೆ ಇನ್ನಿತರ ಮಾಹಿತಿ ಕೆಳಗಿನಂತಿದೆ.
ಹುದ್ದೆ ವಿವರ:
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
- ಸಹಾಯಕ ವ್ಯವಸ್ಥಾಪಕರು : 10
- ಗುಣಮಟ್ಟ ನಿರೀಕ್ಷಕರು : 23
- ಹಿರಿಯ ಸಹಾಯಕರು (ಲೆಕ್ಕ): 33
- ಹಿರಿಯ ಸಹಾಯಕರು: 57
- ಕಿರಿಯ ಸಹಾಯಕರು: 263
- ಒಟ್ಟು ಹುದ್ದೆಗಳು : 386
ವಿದ್ಯಾರ್ಹತೆ: ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ, ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಕೆಇಎ ಅಧಿಕೃತ ಜಾಲತಾಣ kea.kar.nic.in ದ ಮೂಲಕ ಅರ್ಜಿ ಸಲ್ಲಿಸಬಹುದು.