ಬೆಂಗಳೂರು:ಅನುದಾನಿತ ಪ್ರೌಢಶಾಲೆಗಳಲ್ಲಿ 2015ರ ಡಿ.31ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಆರ್ಥಿಕ ಇಲಾಖೆ ಅನುದಾನ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಕೋವಿಡ್ 19ರಿಂದಾಗಿ ಉದ್ಭವಿಸಿದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ದೃಷ್ಟಿಯಿಂದ 2020-21ನೇ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹೊಸದಾಗಿ ವೇತನಾನುದಾನಕ್ಕೆ ಒಳಪಡಿಸದಂತೆ ಹಾಗೂ ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಂತೆ ಸೂಚನೆಗಳನ್ನು ನೀಡಲಾಗಿತ್ತು ಎಂದು ತಿಳಿಸಲಾಗಿದೆ.