ಬೆಂಗಳೂರು:ರಾಜ್ಯ ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಮಾರ್ಚ್ನಿಂದಲೇ ನೂತನ ವೇತನ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ರಾಜ್ಯ ಸಾರಿಗೆಯ ನಾಲ್ಕು ನಿಗಮಗಳ ಸಾರಿಗೆ (ಕೆಎಸ್ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ನೌಕರರಿಗೆ ವೇತನ ಹೆಚ್ಚಳವಾಗಿದೆ. ಸಾರಿಗೆ ನೌಕರರು ಮಾರ್ಚ್ 21ರಿಂದ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಆದರೆ, ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು.