ಬೆಂಗಳೂರು: ಕಂದಾಯ ಅದಾಲತ್ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಅದಾಲತ್ ಕಾರ್ಯಕ್ರಮವನ್ನು 2023 ಡಿಸೆಂಬರ್ 31ರವರೆಗೆ ವಿಸ್ತರಿಸಲು ನಿರ್ಧರಿಸಿ ಈ ಕೆಳಕಂಡಂತೆ ಆದೇಶಿಸಿದ್ದು, ಸರ್ಕಾರದ ಆದೇಶದಲ್ಲಿ ಗಣಕೀಕೃತ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಕಂದಾಯ ಅದಾಲತ್ ಆಂದೋಲನವನ್ನು ಕೈಗೊಳ್ಳಲು ತಿಳಿಸಿದೆ.
ರಾಜ್ಯಾದ್ಯಂತ ಕಂದಾಯ ಅದಾಲತ್ ಆಂದೋಲನ :ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರನ್ವಯ, ಈ ಅಧಿಕಾರ ಪ್ರತ್ಯಾಯೋಜನೆಯು ದಿನಾಂಕ 2022ರ ಡಿಸೆಂಬರ್ 31ರಂದು ಮುಕ್ತಾಯಗೊಂಡಿತ್ತು. ಕಂದಾಯ ಕಾರ್ಯಕ್ರಮದಡಿಯಲ್ಲಿ ಪಹಣಿ ಕಾಲಂ 3 ಮತ್ತು 9ರ ನಮೂದಿನಲ್ಲಿನ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ದೋಷಪೂರಿತ ಪಹಣಿಗಳನ್ನು ಸರಿಪಡಿಸಲಾಗುತ್ತಿದ್ದು, 2022ನೇ ಸಾಲಿನ ಆರಂಭದಲ್ಲಿ ಪಹಣಿ ಕಾಲಂ 3 ಮತ್ತು 9ರಲ್ಲಿ ವ್ಯತ್ಯಾಸವಿರುವ ಹೆಚ್ಚಿನ ಸಂಖ್ಯೆ ಪಹಣಿಗಳನ್ನು ಸರಿಪಡಿಸಿರುವುದು ಕಂಡ ಬಂದಿದ್ದು, 2022-2023 ಸಾಲಿನ ಪ್ರಗತಿಯನ್ನು ಅವಲೋಕಿಸಲಾಗಿ ವಿಸ್ತೀರ್ಣ ವ್ಯತ್ಯಾಸವಿರುವ ಹೆಚ್ಚಿನ ಸಂಖ್ಯೆಯ ಪಹಣಿಗಳನ್ನು ಸರಿವಡಿಸಿರುವುದು ಕಂಡು ಬಂದಿರುತ್ತದೆ.
ಕಂದಾಯ ಅದಾಲತ್ ಆಂದೋಲನದ ಮೂಲಕ ಪಹಣಿ ತಿದ್ದುವ ಕಾರ್ಯವನ್ನು ಮುಂದುವರೆಸುವುದು ಬಹಳ ಅವಶ್ಯಕವಾಗಿದೆ ಈ ಮೂಲಕ ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅನುಕೂಲವಾಗಿರುತ್ತದೆ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ನಗರ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಿಗೆ ಅನ್ವಯವಾಗುವಂತೆ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸುವ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶಿಲ್ದಾರರಿಗೆ ಪ್ರತ್ಯಾಯೋಜಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.
ಕಂದಾಯ ಇಲಾಖೆಯ ಭೂಮಿ ಮತ್ತು ಯು.ಪಿ.ಓ.ಆರ್ ನಿರ್ದೇಶಕರ ಪುಸ್ತಾವನೆಯನ್ನು ಒಪ್ಪಿ ಕಂದಾಯ ಅದಾಲತ್ ಕಾರ್ಯಕ್ರಮವನ್ನು ದಿನಾಂಕ 2023ರ ಡಿಸೆಂಬರ್ 31ರವರೆಗೆ ವಿಸ್ತರಿಸಲು ನಿರ್ಧರಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿರುವ ಅಂಶಗಳು : ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ನಗರ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯಾದ್ಯಂತ ಎಲ್ಲಾ ತಾಲೂಕುಗಳ ಗ್ರಾಮಲೆಕ್ಕಾಧಿಕಾರಿಗಳ ವೃತ್ತ ಮಟ್ಟದಲ್ಲಿ ಕಂದಾಯ ಅದಾಲತ್‌ಗಳನ್ನು ನಡೆಸಿ ಪಹಣಿಗಳ ಲೋಪದೋಷಗಳನ್ನು ಸರಿಪಡಿಸುವ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಸಲುವಾಗಿ ಈ ಹಿಂದಿನಂತೆಯೇ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ದಿನಾಂಕ 2023ರ ಡಿಸೆಂಬರ್ 31ರವರೆಗೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಪ್ರತ್ಯಾಯೋಜಿಸಿ ಆದೇಶಿಸಿದೆ.
ದಿನಾಂಕ 2014 ಜುಲೈ 25ರನ್ವಯ ಕಂದಾಯ ಅದಾಲತ್ ಕಾರ್ಯಕ್ರಮದಡಿಯಲ್ಲಿ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗುವ ಹಿನ್ನೆಲೆಯಲ್ಲಿ ಕಂದಾಯ ಅದಾಲತ್‌ಗಳನ್ನು ನಡೆಸಲು ಪುಸ್ತುತವಿರುವ ಇಲಾಖಾ ಸಿಬ್ಬಂದಿ ಕೊರತೆ ಇದ್ದು, ಹೆಚ್ಚುವರಿ ಸಿಬ್ಬಂದಿ ಅವಶ್ಯಕವಿದ್ದಲ್ಲಿ, ಪ್ರತಿ ತಾಲ್ಲೂಕಿಗೆ ತಲಾ ಇಬ್ಬರು ನಿವೃತ್ತ ಕಂದಾಯ ಇಲಾಖಾ ನೌಕರರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಜನವರಿ 2022ರ ಮಾಹೆಯ ಅಂತ್ಯಕ್ಕೆ ಬಾಕಿ ಇರುವ ಅರ್ಜಿಗಳ ಸಂಖ್ಯೆ ಕಂದಾಯ ಅದಾಲತ್ Entors ಪ್ರಾರಂಭವಾದಾಗ ಇದ್ದಷ್ಟು ಮಟ್ಟದಲ್ಲಿ ಕಂಡುಬರುತ್ತಿಲ್ಲ. ಆದ್ದರಿಂದ, ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಸಂಬಂಧ ಆಯಾ ಕಛೇರಿಯ ಸಿಬ್ಬಂದಿಗಳನ್ನು ಸದರಿ ಕಾರ್ಯಕ್ಕೆ ನಿಯೋಜಿಸಲು ಸೂಚಿಸಿದೆ.