ಬೆಂಗಳೂರು :ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕು/ವಲಯಗಳಲ್ಲಿ (ಕೇರಳ ರಾಜ್ಯದೊಡನೆ ಗಡಿ ಹಂಚಿಕೊಂಡಿರುವ ತಾಲೂಕುಗಳನ್ನು ಹೊರತುಪಡಿಸಿ) 6 ರಿಂದ 10ನೇ ತರಗತಿಗಳನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಭೌತಿಕವಾಗಿ ಪ್ರಾರಂಭಿಸಲಾಗಿತ್ತು.
ಪೂರ್ಣ ಪ್ರಮಾಣದ ತರಗತಿ ಆರಂಭಿಸುವಂತೆ ಸುತ್ತೋಲೆ ಇದೀಗ ಅಕ್ಟೋಬರ್ 4ರಿಂದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 6-10ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸುವಂತೆ ಆದೇಶಿಸಲಾಗಿದೆ. ಹಾಗೆಯೇ, ಮುಂದಿನ ಆದೇಶದವರೆಗೆ ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯ ಕುಡಿಯುವ ನೀರು, ಮಧ್ಯಾಹ್ನ ಉಪಹಾರ ತರುವಂತೆ ಸೂಚಿಸಲಾಗಿದೆ. ಜೊತೆಗೆ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡುವಂತೆಯೂ ಆದೇಶಿಸಲಾಗಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅಕ್ಟೋಬರ್ 10 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ಎಸ್‌ಒಪಿ ಜಾರಿ ಮಾಡುವಂತೆ ಸೂಚಿಸಲಾಗಿದೆ. ಶಾಲೆಗಳಲ್ಲಿ 1 ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಾಗಿರುವುದಿಲ್ಲ.
ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲವೆಂಬುದನ್ನು ದೃಢೀಕರಿಸಬೇಕು. ಒಂದು ವೇಳೆ ಕೋವಿಡ್-19 ಸಾಂಕ್ರಾಮಿಕ ರೋಗವು ಕಂಡು ಬಂದಲ್ಲಿ ಶಾಲೆಯನ್ನು ಮುಚ್ಚಿ ಸ್ಯಾನಿಟೈಸ್ ಮಾಡಿ ಸ್ಥಳೀಯ ಆರೋಗ್ಯಾಧಿಕಾರಿಗಳ ಮಾರ್ಗದರ್ಶನದಂತೆ ಅವರು ತಿಳಿಸಿದ ನಂತರ ಪುನರ್ ಆರಂಭಿಸಬಹುದು.
ಓದಿ:ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ : ವಿಪಕ್ಷ ನಾಯಕ ಸಿದ್ದರಾಮಯ್ಯ