ಕರ್ನಾಟಕ

karnataka

ETV Bharat / state

ಟಿವಿ ಸೀರಿಯಲ್​​​​ಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್:  ಆದರೆ ಮಾರ್ಗಸೂಚಿ ಪಾಲನೆ ಕಡ್ಡಾಯ...! - TV serials

ಕೊರೊನಾ ಮಾರ್ಗಸೂಚಿ ಪಾಲನೆಯ ಷರತ್ತು ವಿಧಿಸಿ ಟಿವಿ ಸೀರಿಯಲ್​ಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

R. Ashok
ಆರ್.ಅಶೋಕ್​

By

Published : May 5, 2020, 3:49 PM IST

ಬೆಂಗಳೂರು:ಕಡಿಮೆ ಸಂಖ್ಯೆಯಲ್ಲಿ ಕಲಾವಿದರನ್ನು, ತಂತ್ರಜ್ಞರನ್ನು ಬಳಸಿಕೊಂಡು ಟಿವಿ ಸೀರಿಯಲ್​ಗಳನ್ನು ಮನೆಯ ಒಳಗೆ ಚಿತ್ರೀಕರಣ ನಡೆಸಲು ರಾಜ್ಯ ಸರ್ಕಾರ ಷರತ್ತು ಬದ್ದ ಅನುಮತಿ ನೀಡಿದೆ.

ಈ ಬಗ್ಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಟೆಲಿವಿಜನ್ ಅಸೋಸಿಯೇಷನ್ ಜೊತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಕಿರುತೆರೆ ಎದುರಿಸುತ್ತಿರುವ ಸಂಕಷ್ಟ ಕುರಿತು ಚರ್ಚೆ ನಡೆಸಲಾಯಿತು. ಆರ್ಥಿಕ ಸಂಕಷ್ಟವನ್ನು ತಡೆಯಲು ಚಿತ್ರೀಕರಣ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಲಾಯಿತು, ಮನವಿಗೆ ಸ್ಪಂದಿಸಿದ ಸರ್ಕಾರ ಕೊರೊನಾ ಮಾರ್ಗಸೂಚಿ ಪಾಲನೆಯ ಷರತ್ತು ವಿಧಿಸಿ ಚಿತ್ರೀಕರಣಕ್ಕೆ ಅನುಮತಿ ನೀಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್​

ಈ ಕುರಿತು ಕಂದಾಯ ಸಚಿವ ಆರ್.ಅಶೋಕ್​ ಮಾತನಾಡಿ, ಕಿರುತೆರೆ ಚಿತ್ರ ನಿರ್ಮಾಣ‌, ಟಿವಿ ಸೀರಿಯಲ್ ಕಲಾವಿದರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ನನ್ನನ್ನು ಭೇಟಿ ಮಾಡಿದ್ದರು. ಅವರೊಂದಿಗೆ ಸಿಎಂ ಭೇಟಿ ಮಾಡಿ ಟಿವಿ ಸೀರಿಯಲ್ ಆರಂಭ ಕುರಿತು ಚರ್ಚೆ ನಡೆಸಲಾಗಿದೆ. ಮನೆಯೊಳಗೆ ಹತ್ತರಿಂದ ಹನ್ನೆರಡು ಜನ ಸೇರಿ ಚಿತ್ರೀಕರಣ ನಡೆಸಲು ಮಾತ್ರ ಅವಕಾಶ ನೀಡಬೇಕು, ಕ್ಯಾಮರಾಮನ್, ಲೈಟ್ ಬಾಯ್ ಬಿಟ್ಟರೆ ಟ್ರಾಲಿ ಇತ್ಯಾದಿಗಳು ಇರುವಂತಿಲ್ಲ, ರಸ್ತೆಯಲ್ಲಿ ಸಾರ್ವಜನಿಕವಾಗಿ ಚಿತ್ರೀಕರಿಸಲು ಕೊರೊನಾ ಸಂದರ್ಭದಲ್ಲಿ ಅನುಮತಿ ಇಲ್ಲ. ಆದರೆ, ಇನ್ ಡೋರ್ ನಲ್ಲಿ ಕಿರುಚಿತ್ರಗಳನ್ನು ನಿರ್ಮಿಸಲು ಟಿವಿ ಸೀರಿಯಲ್​ಗಳನ್ನು ಚಿತ್ರೀಕರಣ ನಡೆಸಲು ಸಮ್ಮತಿಸಲಾಗಿದೆ ಎಂದರು.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜತೆ ಚರ್ಚೆ ನಡೆಸಲಾಗಿದೆ. ಮನೆಯೊಳಗಡೆ ಚಿತ್ರೀಕರಣಕ್ಕೆ ಸರ್ಕಾರದ ಅಭ್ಯಂತರವಿಲ್ಲ ಕೊರೊನಾ ಸಂದರ್ಭದಲ್ಲಿ ಏನೇನು ನಿಯಮಗಳನ್ನು ಪಾಲಿಸಬೇಕು ಅದನ್ನೆಲ್ಲ ಪಾಲಿಸಿಕೊಂಡು ಚಿತ್ರೀಕರಣ ಮಾಡಬಹುದಾಗಿದೆ. ಯಾವುದೇ ರೀತಿಯಲ್ಲೂ ರಿಯಾಲಿಟಿ ಶೋಗಳು, ಸಿನಿಮಾ ಚಿತ್ರಗಳ ಚಿತ್ರೀಕರಣ ನಡೆಸುವಂತಿಲ್ಲ ಅದಕ್ಕೆಲ್ಲ ಜನ ಸೇರಲಿದ್ದಾರೆ. ಕೇಂದ್ರ ಸರ್ಕಾರವೂ ಅದಕ್ಕೆ ಅನುಮತಿ ನೀಡುವುದಿಲ್ಲ. ಕೇವಲ ಮನೆಯ ಒಳಗಡೆ ಚಿತ್ರೀಕರಣ ನಡೆಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ, ಅಲ್ಲದೇ ರಸ್ತೆಯಲ್ಲಿ ಟಿವಿ ಸೀರಿಯಲ್​ಗಳ ಚಿತ್ರೀಕರಣಕ್ಕೆ ಅನುಮತಿ ಇರುವುದಿಲ್ಲ ಎಂದು ತಿಳಿಸಿದರು.

ABOUT THE AUTHOR

...view details