ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಸಜ್ಜಾಗಿರುವ ಬಿಜೆಪಿ ಸರ್ಕಾರ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಉಪ ಸಮಿತಿಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಸಜ್ಜಾಗಿರುವ ಸರ್ಕಾರ: ಸಂಪುಟ ಉಪಸಮಿತಿ ರಚನೆ - scheduled caste
ಪರಿಶಿಷ್ಟರಿಗೆ ಒಳಮೀಸಲಾತಿ ನೀಡಬೇಕು ಎಂಬ ಕೂಗು ಹಲವು ದಶಕಗಳಿಂದ ಕೇಳಿ ಬರುತ್ತಿದೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಸಜ್ಜಾಗಿರುವ ಸರ್ಕಾರ: ಸಂಪುಟ ಉಪಸಮಿತಿ ರಚನೆ
ಪರಿಶಿಷ್ಟರ ಮೀಸಲಾತಿ ಸೌಲಭ್ಯವನ್ನು ಬಲಿಷ್ಠರು ಮಾತ್ರ ಪಡೆದುಕೊಳ್ಳುತ್ತಿದ್ದು ಒಳಮೀಸಲಾತಿ ನೀಡದೇ ಹೋದರೆ ಈ ಸೌಲಭ್ಯ ಪರಿಣಾಮಕಾರಿಯಾಗಿ ಹಂಚಿಕೆಯಾಗುವುದಿಲ್ಲ ಎಂಬ ಅಸಮಾಧಾನ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಳಮೀಸಲಾತಿ ಸೌಲಭ್ಯ ನೀಡುವ ಸಂಬಂಧ ಪರಿಶೀಲನೆ ನಡೆಸಲು ಸಂಪುಟ ಉಪಸಮಿತಿ ರಚಿಸಿದೆ. ಈ ಉಪಸಮಿತಿ ಬೇಡಿಕೆಯನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.