ಕರ್ನಾಟಕ

karnataka

ETV Bharat / state

ಅಮಿತ್​ ಶಾ ವರ್ಚುವಲ್​ ರ‍್ಯಾಲಿಗಿರದ ನಿರ್ಬಂಧ ಡಿಕೆಶಿ ಪದಗ್ರಹಣಕ್ಕೇಕೆ? ಸಿದ್ದರಾಮಯ್ಯ ಪ್ರಶ್ನೆ - bangalore news

ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ್ದು, ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ
ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ

By

Published : Jun 9, 2020, 10:09 PM IST

Updated : Jun 10, 2020, 12:32 AM IST

ಬೆಂಗಳೂರು: ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದಗ್ರಹಣ ಸಮಾರಂಭಕ್ಕೆ ಎರಡನೇ ಬಾರಿ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ‍್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಅನ್ವಯ ಆಗುವುದೇ ಎಂದು ಸಿದ್ದರಾಮಯ್ಯ ಅವರು ಪ್ರಶಿಸಿದ್ದಾರೆ.

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ

ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಸರ್ಕಾರ ಏನೇ ದಮನಕಾರಿ ಪ್ರವೃತ್ತಿ ತೋರಿಸಿದರೂ, ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರೇ ಹೊರತು ಕಾನೂನು ಭಂಗ ಮಾಡುವವರಲ್ಲ. ಕಾನೂನಿನ ಅಡಿಯಲ್ಲೇ ನಾವು ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Last Updated : Jun 10, 2020, 12:32 AM IST

ABOUT THE AUTHOR

...view details