ಬೆಂಗಳೂರು:ಮೊಬೈಲ್ ಅ್ಯಪ್ ಆಧಾರಿತ ಓಲಾ, ಉಬರ್ ಸೇವೆಗಳಲ್ಲಿ ಆಟೋಗಳ ಬಳಕೆಗೆ ದರ ನಿಗದಿಗೆ ಕುರಿತ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಮತ್ತೆ ಕಾಲಾವಕಾಶ ಕೋರಿದೆ.
ಒಲಾ, ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಲು ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನವರು ಹೈಕೋರ್ಟ್ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ದರ ಹೆಚ್ಚಳಕ್ಕೆ ಕೋರಿ ಓಲಾ ಉಬರ್ ಸಂಸ್ಥೆಗಳು ಮಧ್ಯಂತರ ಅರ್ಜಿ ಸಲ್ಲಿಸಿದ್ದವು.