ಕರ್ನಾಟಕ

karnataka

ETV Bharat / state

ಭೀಮಾ ನದಿ ಪ್ರವಾಹದಿಂದ ತತ್ತರಿಸಿದವರ ಸಹಾಯಕ್ಕೆ ಸರ್ಕಾರ ಧಾವಿಸಲಿ: ಸುರ್ಜೆವಾಲಾ ಟ್ವೀಟ್​

ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಮಾ ನದಿಯಿಂದಾಗಿ ಪ್ರವಾಹ ಉಂಟಾಗಿದ್ದು, ಈ ಕೂಡಲೇ ಸರ್ಕಾರ ಸಂತ್ರಸ್ತರ ಸಹಾಯಕ್ಕೆ ತೆರಳಬೇಕು . ಬೆಳೆ ಪರಿಹಾರ ಸೇರಿದಂತೆ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ.

Randeep Singh Surjewala
ಸುರ್ಜೆವಾಲಾ

By

Published : Oct 17, 2020, 6:18 PM IST

ಬೆಂಗಳೂರು: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕನ್ನಡದಲ್ಲಿ ಟ್ವೀಟ್ ಮಾಡಿರುವ ಅವರು, ಭೀಮಾ ನದಿಯ ಪ್ರವಾಹದಿಂದಾಗಿ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜನರು ತತ್ತರಿಸಿ ಹೋಗಿದ್ದಾರೆ. ನೂರಾರು ಹಳ್ಳಿಗಳಲ್ಲಿ ಜನರು ತಮ್ಮ ಮನೆ-ಮಠ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ದಿಕ್ಕೇ ತೋಚದೇ ಕಂಗಾಲಾಗಿದ್ದಾರೆ. 30 ವರ್ಷಗಳಲ್ಲಿ ಕಂಡಿರದ ಪ್ರವಾಹದ ಮಟ್ಟ ಐತಿಹಾಸಿಕ ಚಂದ್ರಲಾ ಪರಮೇಶ್ವರಿ ದೇವಸ್ಥಾನ & ಬುದ್ದ ದೇವಾಲಯಗಳು ಮುಳುಗಿಹೋಗಿವೆ ಎಂದಿದ್ದಾರೆ.

ಸಾವಿರಾರು ಎಕರೆ ರೈತರ ಜಮೀನು ಸಂಪೂರ್ಣ ಜಲಾವೃತವಾಗಿದ್ದು, ಅನ್ನದಾತರಿಗೆ ಭಾರಿ ನಷ್ಟವಾಗಿದೆ. ಆದರೆ ರಾಜ್ಯದ ಹಾಗೂ ಕೇಂದ್ರದ ಮಂತ್ರಿಗಳು ಈವರೆಗೂ ಇತ್ತ ತಲೆ ಹಾಕಿಲ್ಲಾ! ಬಂದವರೂ ಕಾಟಾಚಾರಕ್ಕೆ ಬಂದು ಹೋಗಿದ್ದಾರೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಕೂಡಲೇ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಅಲ್ಲದೆ, ಪ್ರವಾಹ ಪೀಡಿತರ ರಕ್ಷಣೆಗಾಗಿ ಕೂಡಲೇ NDRF ಅನ್ನು ಎಲ್ಲಾ ನೆರೆಪೀಡಿತ ಪ್ರದೇಶ ಗಳಿಗೆ ನಿಯೋಜಿಸಬೇಕು. ಬೆಳೆ ಪರಿಹಾರ ಸೇರಿದಂತೆ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ದನಿ ಎತ್ತಿದ್ದು, ಕೂಡಲೇ ಈ ಭಾಗದಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಕಾಂಗ್ರೆಸ್ ನಾಯಕರಿಗೆ ದನಿಗೂಡಿಸಿದ್ದಾರೆ.

ABOUT THE AUTHOR

...view details