ಬೆಂಗಳೂರು:ರಾಜ್ಯ ಸರ್ಕಾರ ನಿಗಮವನ್ನು ರಚಿಸಿದರಷ್ಟೇ ಸಾಲದು, ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ತಿಳಿಸಿದ್ದಾರೆ.
ನಿಗಮ ಸ್ಥಾಪಿಸಿದರೆ ಸಾಲದು, ವೀರಶೈವರ ಅಭಿವೃದ್ಧಿಗೆ ಶ್ರಮಿಸಬೇಕು: ಎಸ್.ಆರ್.ಪಾಟೀಲ್ - ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಬಗ್ಗೆ ಎಸ್.ಆರ್. ಪಾಟೀಲ್ ಟ್ವೀಟ್
ರಾಜ್ಯ ಸರ್ಕಾರ ನಿಗಮವನ್ನು ರಚಿಸಿದರಷ್ಟೇ ಸಾಲದು, ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವೀರಶೈವ-ಲಿಂಗಾಯತ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ‘ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ’ ರಚನೆಗೆ ರಾಜ್ಯ ಸರ್ಕಾರ ಆದೇಶಿಸಿರುವುದು ಸ್ವಾಗತಾರ್ಹ. ಆದರೆ ರಾಜ್ಯ ಸರ್ಕಾರ ನಿಗಮವನ್ನು ರಚಿಸಿದರಷ್ಟೇ ಸಾಲದು, ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ–ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಆದೇಶಿಸಲಾಗಿದೆ. ಮಿಸಲಾತಿ ಪ್ರಮಾಣ ಶೇ.50ನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ 1992 ರಲ್ಲಿಯೇ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರಗಳಿಗೆ ಯಾವುದೇ ಸಮುದಾಯ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಮನವರಿಕೆಯಾದರೆ, ಅಂತಹ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡಲು ಅವಕಾಶವಿದೆ. ಹೀಗಾಗಿ ವೀರಶೈವ-ಲಿಂಗಾಯತ ಸಮುದಾಯಕ್ಕೆ ರಾಜ್ಯ ಸರ್ಕಾರ ಶೇ.16ರಷ್ಟು ಮೀಸಲಾತಿ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
TAGGED:
ಎಸ್.ಆರ್.ಪಾಟೀಲ್ ಟ್ವೀಟ್