ಕರ್ನಾಟಕ

karnataka

ETV Bharat / state

ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಸಿಎಂ - ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಕುರಿತು ಜನಸಾಮಾನ್ಯರಲ್ಲಿ ಜನಜಾಗೃತಿ

ರಾಜ್ಯದಲ್ಲಿ ಆಡಳಿತಾತ್ಮಕವಾಗಿ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯೆಡೆಗೆ ತೆಗೆದುಕೊಂಡು ಹೋಗಲು ಸರ್ಕಾರ ಬದ್ಧವಾಗಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Kn_bng_01_cm_Townhall_Prgm_7202707
ಸಂವಿಧಾನದ ಆಶಯಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಬಿಎಸ್ ವೈ

By

Published : Nov 26, 2019, 7:13 PM IST

ಬೆಂಗಳೂರು: ರಾಜ್ಯದಲ್ಲಿ ಆಡಳಿತಾತ್ಮಕವಾಗಿ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡು ರಾಜ್ಯವನ್ನು ಅಭಿವೃದ್ಧಿಯೆಡೆಗೆ ತೆಗೆದುಕೊಂಡು ಹೋಗಲು ಸರ್ಕಾರ ಬದ್ಧವಾಗಿದೆ. ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಸಿಎಂ ಬಿಎಸ್​​ವೈ

ನಗರದ ಟೌನ್ ಹಾಲ್​​ನಲ್ಲಿ ಭಾರತೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಮಹತ್ವ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ದಿನಾಚರಣೆ ಮಾಡಲಾಗುತ್ತಿದೆ. ಸಾಮಾಜಿಕ ಅಸಮಾನತೆ ಕೊನೆಗೊಳಿಸುವ ತತ್ವಗಳು ಹಾಗೂ ಸಮಾಜೋದ್ಧಾರದ ಆಕಾಂಕ್ಷೆಗಳನ್ನು ಹೊಂದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯತೆ. ಸಮಾಜವನ್ನು ಸರ್ವಾಂಗೀಣವಾಗಿ ಪುನಶ್ಚೇತನಗೊಳಿಸಲು ಬೇರೆ ಯಾವ ದೇಶದ ಸಂವಿಧಾನವೂ ಇಷ್ಟು ಒತ್ತು ನೀಡಿಲ್ಲ ಎಂದು ಸಂವಿಧಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದರು.

For All Latest Updates

TAGGED:

ABOUT THE AUTHOR

...view details