ಬೆಂಗಳೂರು: ಬುಧವಾರದಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜು ಆರಂಭಿಸಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಹಿಜಾಬ್ ಗಲಾಟೆ ಸಂಬಂಧ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಫೆ.16ರಂದು ಪಿಯುಸಿ, ಡಿಗ್ರಿ ಕಾಲೇಜುಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಶಕ್ತಿ ಭವನದಲ್ಲಿ ಸಿಎಂ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಹಿಜಾಬ್ ಸಂಘರ್ಷ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.