ಬೆಂಗಳೂರು:ಬುಧವಾರವಷ್ಟೇ 21 ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ನಿನ್ನೆ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಕಾತಿ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿತ್ತು. ಆದರೆ, ಕೆಲವರು ಪ್ರತಿಷ್ಠಾನಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಣೆ ಮಾಡಿದ್ದರು. ಜೊತೆಗೆ ಕೆಲವು ಎಡವಟ್ಟುಗಳೂ ಆಗಿದ್ದವು. ಈ ಸಂಬಂಧ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂಪಡೆದಿದೆ.