ಕರ್ನಾಟಕ

karnataka

ETV Bharat / state

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ
ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

By

Published : Oct 23, 2022, 10:45 PM IST

ಬೆಂಗಳೂರು:ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸಚಿವ ಸಂಪುಟ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಭಾನುವಾರ ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಎಸ್ಸಿ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಎಸ್ಟಿ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಸಲಾಗಿದೆ.

ಕರ್ನಾಟಕದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಅಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದು ಗೊತ್ತಿದೆ. ಇದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರ ಪ್ರಕಟಿಸಲಾಗಿದ್ದು, ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ 3 ರಿಂದ 7 ಕ್ಕೆ ಏರಿಕೆಯಾಗಲಿದೆ. ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ಧತೆಯಿದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಅಧ್ಯಾದೇಶಕ್ಕೆ ವಿಧಾನ ಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಹಿತಿ ನೀಡಿದ್ದಾರೆ.

(ಓದಿ: ಎಸ್​ಸಿ ಎಸ್​ಟಿ ಮೀಸಲಾತಿ ಹೆಚ್ಚಳ: ಸರ್ಕಾರ ಹೊರಡಿಸಲಿರುವ ಸುಗ್ರೀವಾಜ್ಞೆಯಲ್ಲಿ ಏನಿರಲಿದೆ?)

ABOUT THE AUTHOR

...view details