ಕರ್ನಾಟಕ

karnataka

ETV Bharat / state

ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: ಅಧಿಸೂಚನೆ ಹೊರಡಿಸಿದ ಸರ್ಕಾರ - ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ವಿಧಾನ ಮಂಡಲದಲ್ಲಿ ಅಂಗೀಕಾರಗೊಂಡ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

apmc-amendment
ಸರ್ಕಾರ

By

Published : Jan 1, 2021, 2:24 PM IST

ಬೆಂಗಳೂರು:ಬಹುಚರ್ಚಿತ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ವಿಧಾನ ಮಂಡಲದಲ್ಲಿ ಅಂಗೀಕಾರಗೊಂಡ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ತಿದ್ದುಪಡಿ ಕಾಯ್ದೆಯಡಿ ಮಾರುಕಟ್ಟೆ ಪ್ರಾಂಗಣ, ಉಪ ಪ್ರಾಂಗಣ ಅಥವಾ ಬೇರಾವುದೇ ಸ್ಥಳದಲ್ಲಿ ಅಧಿಸೂಚಿತ ಕೃಷಿ ಉತ್ಪನ್ನಗಳ ಖರೀದಿ ಅಥವಾ ಮಾರಾಟಕ್ಕಾಗಿ ಉಪಯೋಗಿಸಬಹುದಾಗಿದೆ. ಅಧಿಸೂಚಿತ ಕೃಷಿ ಉತ್ಪನ್ನಗಳನ್ನು ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಸಂಘ, ಪ್ರಾಥಮಿಕ ಕೃಷಿ ಸಹಕಾರ ಪತ್ತಿನ ಸಂಘ, ಸರ್ಕಾರದ ಅನುಮತಿ ಪಡೆದ ಯಾವುದೇ ಸಹಕಾರ ಸಂಘದ ಮೂಲಕ ಖರೀದಿ ಮತ್ತು ಮಾರಾಟ ಮಾಡಬಹುದಾಗಿದೆ.

ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ವ್ಯಾಪಾರಸ್ಥರು, ವಿವಿಧ ಕಂಪನಿಯವರು ನೇರವಾಗಿ ರೈತರ ಮನೆ ಬಾಗಿಲಿಗೆ ತೆರಳಿ ಬೆಳೆ ಖರೀದಿಸಬಹುದು. ರಾಜ್ಯದ ಯಾವುದೇ ಜಿಲ್ಲೆಯ ಎಪಿಎಂಸಿಯಲ್ಲಿ (ಕರ್ನಾಟಕ ಕೃಷಿ ಉತ್ಪನ್ನಗಳ ಮಾರಾಟ ನಿಯಂತ್ರಣ ಮತ್ತು ಅಭಿವೃದ್ದಿ ಕಾಯ್ದೆ) ರೈತರು ತಮ್ಮ ಬೆಳೆ ಮತ್ತು ಉತ್ಪನ್ನಗಳ ಮಾರಾಟ ಮಾಡಬಹುದಾಗಿದೆ.

ಹಳೆ ಕಾಯಿದೆಯಂತೆ ವರ್ತಕರು ನೇರವಾಗಿ ರೈತರ ಹೊಲದಿಂದ ಬೆಳೆ ಖರೀದಿಸುವಂತಿಲ್ಲ. ಹಾಗೆ ಮಾಡಿದರೆ ವರ್ತಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಬಹುದಾಗಿತ್ತು. ಈ ಹೊಸ ತಿದ್ದುಪಡಿ ಕಾಯ್ದೆಯಡಿ ರೈತರು ಎಲ್ಲಿ ಬೇಕಾದರೂ ತಮ್ಮ ಉತ್ಪನ್ನಗಳನ್ನು ಖರೀದಿ ಮತ್ತು ಮಾರಾಟ ಮಾಡಬಹುದಾಗಿದೆ.

ABOUT THE AUTHOR

...view details