ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಕೊರೊನಾ ತಪಾಸಣೆಗೆ ಒಳಗಾಗಿದ್ದು, ವರದಿ ನೆಗೆಟಿವ್ಬಂದಿದೆ ಎಂದು ರಾಜಭವನ ಅಧಿಕೃತವಾಗಿ ತಿಳಿಸಿದೆ.
ರಾಜ್ಯಪಾಲರ ಕೊರೊನಾ ವರದಿ ನೆಗೆಟಿವ್ - Bangalore covid news
ರಾಜ್ಯಪಾಲ ವಜುಭಾಯ್ ವಾಲಾ ಹಾಗೂ ರಾಜ್ಯಪಾಲರ ವಿಶೇಷ ಅಧಿಕಾರಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇಬ್ಬರ ವರದಿಯೂ ನೆಗೆಟಿವ್ ಬಂದಿದೆ ಎಂದು ರಾಜಭವನ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ರಾಜ್ಯಪಾಲರ ಕೊರೊನಾ ವರದಿ ನೆಗಟಿವ್
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಆ್ಯಂಟಿಜೆನ್ ಟೆಸ್ಟ್ಗೆ ರಾಜ್ಯಪಾಲರು ಹಾಗು ಅವರ ವಿಶೇಷ ಅಧಿಕಾರಿ ಒಳಗಾಗಿದ್ದರು. ಇಬ್ಬರ ವರದಿಯೂ ನೆಗೆಟಿವ್ ಬಂದಿದೆ ಎಂದು ರಾಜಭವನ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಜುಲೈ 31 ರಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜಭನವಕ್ಕೆ ಭೇಟಿ ನೀಡಿದ್ದರು. ರಾಜ್ಯಪಾಲರ ಜೊತೆ ಕೆಲಕಾಲ ಮಾತುಕತೆ ನಡೆಸಿದ್ದರು. ಕೊರೊನಾ ನಿಯಂತ್ರಣ ಸಂಬಂಧದ ಕ್ರಮಗಳ ಕುರಿತು ಚರ್ಚೆ ನಡೆಸಿದ್ದರು.