ಕರ್ನಾಟಕ

karnataka

ETV Bharat / state

ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆ ಗಣರಾಜ್ಯೋತ್ಸವ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸರಳ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಲೆಟ್ ಪ್ರೂಫ್ ಗ್ಲಾಸ್‌ಶೀಲ್ಡ್ ತೆಗೆಸಿ ಸಾಮಾನ್ಯ ವೇದಿಕೆಯಲ್ಲಿ ಭಾಷಣ ಮಾಡಿ ಗಮನ ಸೆಳೆದಿದ್ದಾರೆ..

Governor Thavar Chand Gehlot delivering Republican speech without bullet-proof glass
ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆ ಗಣರಾಜ್ಯೋತ್ಸವ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

By

Published : Jan 26, 2022, 4:17 PM IST

ಬೆಂಗಳೂರು :73ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ಮಾಡುವ ಮೂಲಕ ಸರಳವಾಗಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ಸರ್ಕಾರಿ ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು ಆಗಮಿಸುವ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಭಾಷಣ ಮಾಡುವ ಸ್ಥಳದಲ್ಲಿ ಬುಲೆಟ್ ಪ್ರೂಫ್ ಗ್ಲಾಸ್ ನಿರ್ಮಾಣ ಮಾಡಲಾಗುತ್ತದೆ.

ಅದರಂತೆ ಸರ್ಕಾರದಿಂದ ವೇದಿಕೆ ಮೇಲೆ ಬುಲೆಟ್ ಪ್ರೂಫ್ ಗ್ಲಾಸ್ ಸಿದ್ಧಪಡಿಸಲಾಗಿತ್ತು. ಆದರೆ, ರಾಜ್ಯಪಾಲರು, ಬುಲೆಟ್ ಪ್ರೂಫ್ ಗ್ಲಾಸ್‌ಶೀಲ್ಡ್ ತೆಗೆಸಿ ಸಾಮಾನ್ಯ ವೇದಿಕೆಯಲ್ಲಿ ನಾಡಿನ ಜನತೆಗೆ ಸಂದೇಶ ನೀಡುವ ಮೂಲಕ ಗಮನ ಸೆಳೆದರು.

For All Latest Updates

TAGGED:

ABOUT THE AUTHOR

...view details