ಕರ್ನಾಟಕ

karnataka

ETV Bharat / state

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲ ಗೆಹ್ಲೋಟ್‌ - Saluting Bravehearts

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಬೆಂಗಳೂರಿನ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಅವರನ್ನು ಗೌರವಿಸಿದ್ದಾರೆ.

Governor paid tribute to the freedom fighters
ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

By

Published : Aug 9, 2022, 5:10 PM IST

Updated : Aug 9, 2022, 5:20 PM IST

ಬೆಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಬೆಂಗಳೂರಿನಲ್ಲಿರುವ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ, ಸನ್ಮಾನಿಸಿ, ಗೌರವಿಸಿದರು. ಸಚಿವರಾದ ಆರ್.ಅಶೋಕ್, ಅಶ್ವತ್ಥನಾರಾಯಣ ಜೊತೆಗಿದ್ದರು.

ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು

ಮೊದಲಿಗೆ ಜೆ.ಪಿ.ನಗರದ 4ನೇ ಹಂತದ ಆಶ್ರಯ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿರುವ ಸ್ವಾತಂತ್ರ್ಯ ಹೋರಾಟಗಾರ ಆರ್. ನಾರಾಯಣಪ್ಪ ಅವರ ಮನೆಗೆ ಭೇಟಿ ನೀಡಿದ ರಾಜ್ಯಪಾಲರು, ಹಿರಿಯ ಸ್ವಾತಂತ್ರ್ಯ ಹೋರಾಟಗಾರನ್ನು ಸನ್ಮಾನಿಸಿ, ಸಿಹಿ ತಿನ್ನಿಸಿ ಪ್ರಮಾಣ ಪತ್ರ ನೀಡಿದರು.

ಬಳಿಕ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶಂಕರನಾರಾಯಣ ರಾವ್ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ಕೆಲಕಾಲ ಕುಶಲೋಪರಿ ವಿಚಾರಿಸಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಇದನ್ನೂ ಓದಿ:ಕರುನಾಡ ವೀರ ರಾಣಿಯರು ದಾಸ್ಯಮುಕ್ತಿಗಾಗಿ ಹೋರಾಡಿದ ಧೀರೋದಾತ್ತ ಪರಂಪರೆ

ಇದಾದ ನಂತರ ಮಲ್ಲೇಶ್ವಂರಂನಲ್ಲಿರುವ ನಾಗಭೂಷಣ್ ರಾವ್ ಮನೆಗೆ ತೆರಳಿದ ರಾಜ್ಯಪಾಲರು, ನಾಗಭೂಷಣ್ ರಾವ್ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ಈ ಸಂದರ್ಭದಲ್ಲಿ ನಾಗಭೂಷಣ್ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟಗಳಲ್ಲಿ ಭಾಗಿಯಾದ ಘಟನೆಗಳ ಬಗ್ಗೆ ವಿವರಿಸಿದರು. ಇದರ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲರು, ತಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿ ತಲೆಬಾಗಿ ನಮಿಸಿದರು.

Last Updated : Aug 9, 2022, 5:20 PM IST

ABOUT THE AUTHOR

...view details