ಬೆಂಗಳೂರು :ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ನಂತರ ಅವರ ಉತ್ತರಾಧಿಕಾರಿಯಾಗಿ ಗಣಿಗಾರಿಕೆ ಸಚಿವ ಮುರುಗೇಶ ನಿರಾಣಿ ನೇಮಕ ಮಾಡುವ ಪ್ರಸ್ಥಾಪಕ್ಕೆ ಬಿಜೆಪಿ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ.
ನಗರದ ಕೇಶವ ಕೃಪದಲ್ಲಿ ಆರ್‌ಎಸ್‌ಎಸ್‌ನ ಪ್ರಮುಖರು ಮತ್ತು ಮಠಾಧೀಶರು ಉಪಸ್ಥಿತರಿದ್ದ ಸಭೆಯಲ್ಲಿ ಹೊಸ ಮುಖ್ಯಮಂತ್ರಿ ನೇಮಕ ಬಗ್ಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ನಿರಾಣಿ ಅವರಿಗೆ ಸಿಎಂ ಹುದ್ದೆ ನೀಡುವುದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
ಸಭೆಯಲ್ಲಿ ನಿರಾಣಿ ನಾಯಕತ್ವದ ಬಗ್ಗೆ ಕೆಲವು ಮಠಾಧೀಶರು ಒಲವು ವ್ಯಕ್ತಪಡಿಸಿದಾಗ ತಕ್ಷಣ ಗೋವಿಂದ ಕಾರಜೋಳ ಅವರು ಅತೃಪ್ತಿ ವ್ಯಕ್ತಪಡಿಸಿದರಲ್ಲದೇ, ತಾವು ಹೊಂದಿರುವ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರಗುಳಿಯುವ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.