ಹೊಸಕೋಟೆ:ಈ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅಧಿಕಾರ ಸ್ವೀಕರಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಬಿಜೆಪಿ ಸರ್ಕಾರ ದೇಶವನ್ನ ಉನ್ನತಿಯೆಡೆಗೆ ತೆಗೆದುಕೊಂಡು ಹೋಗುತ್ತಿದೆ. ಹೊಸಕೋಟೆಯಲ್ಲಿ ಆನೇಕ ಅಭಿವೃದ್ದಿಗಳನ್ನ ಎಂಟಿಬಿ ನಾಗರಾಜು ಮಾಡಿದ್ದಾರೆ ವಿನಃ ಕಾಂಗ್ರೆಸ್‌ನಿಂದಾಗಿ ಈ ಕ್ಷೇತ್ರದಲ್ಲಿ ಅಭಿವೃದ್ದಿಗಳು ಆಗಿಲ್ಲ. ಹೀಗಾಗಿ ಈ ಬಾರಿಯೂ ಮತದಾರರು ಎಂಟಿಬಿ ನಾಗರಾಜು ಅವರನ್ನೇ ಗೆಲ್ಲಿಸುತ್ತಾರೆ ಎಂದರು.