ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಶಾಸಕ ಗೋವಿಂದ ಕಾರಜೋಳ ಭೇಟಿಯಾಗಿದ್ದರು.
ಭೇಟಿ ವೇಳೆ ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವಂತೆ ಮನವಿ ಮಾಡಿದ್ದೇವೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

ದೆಹಲಿಯಲ್ಲಿ ಪಿಎಂ ಭೇಟಿ ಬಳಿಕ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಕೃಷ್ಣ ಹಾಗೂ ಘಟಪ್ರಭಾ ನದಿಗಳ ಪ್ರವಾಹದಿಂದ ತೊಂದರೆಯಾಗಿರುವ ಜನರಿಗೆ ನೆರವು ನೀಡುವಂತೆ ಮನವಿ ಮಾಡಿದ್ದೇವೆ. ಅಲ್ಲದೇ ಈ ನಿಟ್ಟಿನಲ್ಲಿ ಪ್ರಧಾನಿ ಅವರು ಅಗತ್ಯ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಹಾಗೆಯೇ ಘಟಪ್ರಭಾ ನದಿಯಲ್ಲಿ ಹಿಂದೆಂದೂ ಕಂಡರಿಯದ ಪ್ರವಾಹ ಉಂಟಾಗಿದೆ. ಇದಕ್ಕಾಗಿ ಈಗಾಗಲೇ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಹೋಗಬೇಕು. ಮೈಮರೆತು ಕೂರದೆ ಅಧಿಕಾರಿಗಳೊಂದಿಗೆ ಸಹಕರಿಸಿ, ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಕಾರಜೋಳ ಮನವಿ ಮಾಡಿದ್ದಾರೆ.