ಬೆಂಗಳೂರು: ಮೊಬೈಲ್ ಆ್ಯಪ್ ಆಧಾರಿತ ಓಲಾ ಉಬರ್ ಸೇವೆಗಳಲ್ಲಿ ಆಟೋರಿಕ್ಷಾಗಳ ಬಳಕೆ ನಿರ್ಬಂಧಿಸಿದ್ದ ಅರ್ಜಿ ಸಂಬಂಧ ಪರಿಹಾರ ಕಂಡುಕೊಳ್ಳಲು ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್ಗೆ ಸರ್ಕಾರ ಮನವಿ ಮಾಡಿದೆ.
ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ನೇತೃತ್ವದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತ್ತು.
ಇದನ್ನೂ ಓದಿ:ಓಲಾ, ಉಬರ್ ಆಟೋ ರಿಕ್ಷಾ ಸೇವೆ: ಬಲವಂತದ ಕ್ರಮ ಬೇಡ, ಪ್ರಯಾಣ ಶುಲ್ಕ ನಿಗದಿಗೆ ಹೈಕೋರ್ಟ್ ಸೂಚನೆ