ಬೆಂಗಳೂರು:ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ದಿನೇಶ್ ಗುಂಡೂರಾವ್ - Dinesh Gundu Rao
ಮೋದಿಯವರ ಆಡಳಿತದಲ್ಲಿ ಬಡವರು, ಜನಸಾಮಾನ್ಯರು ಬದುಕಲು ಅವಕಾಶವೇ ಇಲ್ಲದಂತಾಗಿದೆ. ಒಂದು ಕಡೆ ಗ್ಯಾಸ್ ಸಬ್ಸಿಡಿ ರದ್ದು ಮಾಡಿರುವ ಸರ್ಕಾರ, ಮತ್ತೊಂದು ಕಡೆ ಸೀಮೆಎಣ್ಣೆ ದರ ಏರಿಸಿ ಬಡವರನ್ನು ಗುಡಿಸಿ ಗುಂಡಾಂತರ ಮಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೋದಿಯವರ ಆಡಳಿತದಲ್ಲಿ ಬಡವರು, ಜನಸಾಮಾನ್ಯರು ಬದುಕಲು ಅವಕಾಶವೇ ಇಲ್ಲದಂತಾಗಿದೆ. ಒಂದು ಕಡೆ ಗ್ಯಾಸ್ ಸಬ್ಸಿಡಿ ರದ್ದು ಮಾಡಿರುವ ಸರ್ಕಾರ, ಮತ್ತೊಂದು ಕಡೆ ಸೀಮೆಎಣ್ಣೆ ದರ ಏರಿಸಿ ಬಡವರನ್ನು ಗುಡಿಸಿ ಗುಂಡಾಂತರ ಮಾಡುತ್ತಿದೆ.
ಬ್ರಿಟಿಷರ ಆಳ್ವಿಕೆಗಿಂತಲೂ ಅತ್ಯಂತ ಹೀನವಾದ ಆಡಳಿತವಿದು. ಈ ಸರ್ಕಾರಕ್ಕೆ ಬಡವರ ಬಗ್ಗೆ ಕನಿಷ್ಠ ಕಾಳಜಿಯಾದರೂ ಇರಬೇಡವೇ? ಎಂದು ಪ್ರಶ್ನಿಸಿದ್ದಾರೆ. ಇಂಧನ, ಅಡುಗೆ ಅನಿಲ ಬೆಲೆ ಹೆಚ್ಚಳ, ಸಬ್ಸಿಡಿ ಕಡಿತವನ್ನು ಕಾಂಗ್ರೆಸ್ ನಾಯಕರು ನಿರಂತರವಾಗಿ ಖಂಡಿಸುತ್ತಾ ಬಂದಿದ್ದು, ಇದೀಗ ಸೀಮೆಎಣ್ಣೆ ಬೆಲೆ ಕೂಡ ಹೆಚ್ಚಾಗಿರುವ ಹಿನ್ನೆಲೆ ಪಕ್ಷದ ಪರವಾಗಿ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.