ಕರ್ನಾಟಕ

karnataka

ETV Bharat / state

ಅಂಬಿಗರ ಚೌಡಯ್ಯ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿ ಸರ್ಕಾರ ಆದೇಶ - State Government Grants

ಬಿ.ನಾರಾಯಣರಾವ್ ನಿಧನದಿಂದ ತೆರವಾಗಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಆಡಳಿತಾರೂಢ ಬಿಜೆಪಿ ಪಕ್ಷ ಉಪಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕ್ಷೇತ್ರದ ಜನರ ಮನ ಗೆಲ್ಲಲು ತಯಾರಿ ನಡೆಸಿದೆ. ಅಂಬಿಗರ ಚೌಡಯ್ಯ ಸಮುದಾಯ ಭವನದ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವ ಮೂಲಕ ಉಪಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.

Govt has sanctioned a grant for the construction of Ambigara Chowdaiya Community Hall
ಸಂಗ್ರಹ ಚಿತ್ರ

By

Published : Nov 14, 2020, 11:50 PM IST

ಬೆಂಗಳೂರು : ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಅಂಬಿಗರ ಚೌಡಯ್ಯ ಸಮುದಾಯ ಭವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಸರ್ಕಾರ ಆದೇಶ ಪತ್ರ

ಬಸವಕಲ್ಯಾಣ ಉಪಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಅಷ್ಟರಲ್ಲೇ ಈ ಕ್ಷೇತ್ರದಲ್ಲಿ ರಾಜಕೀಯ ಲಾಭದ ಲೆಕ್ಕಾಚಾರ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಅಂಬಿಗರ ಚೌಡಯ್ಯ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನವನ್ನು ಷರತ್ತುಗಳಿಗೆ ಒಳಪಡಿಸಿ ಮಂಜೂರಾತಿ ನೀಡಿ ಸರ್ಕಾರ ಆದೇಶಿಸಿದೆ. ಇನ್ನೂ ಬಸವಕಲ್ಯಾಣದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂ. ಮಿಸಲಿಡಲು ಸಿಎಂ ಆದೇಶಿಸಿದ್ದಾರೆ.

ಸರ್ಕಾರ ಆದೇಶ ಪತ್ರ

ಬಿ.ನಾರಾಯಣರಾವ್ ಅವರ ಅಕಾಲಿಕ ನಿಧನದಿಂದ ಬಸವಕಲ್ಯಾಣ ಉಪಚುನಾವಣೆ ನಡೆಯಬೇಕಿದ್ದು ಶೀಘ್ರದಲ್ಲೇ ದಿನಾಂಕ ಪ್ರಕಟಿಸಿ ಚುನಾವಣೆ ಆಯೋಗ ಆದೇಶ ಹೊರಡಿಸಲಿದೆ. ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಆಡಳಿತಾರೂಢ ಬಿಜೆಪಿ ಪಕ್ಷ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.

ಸರ್ಕಾರ ಆದೇಶ ಪತ್ರ

ABOUT THE AUTHOR

...view details