ಕರ್ನಾಟಕ

karnataka

ETV Bharat / state

ಬಡತನ ಹೋಗಲಾಡಿಸಲು ಆರ್ಥಿಕ ಚಟುವಟಿಕೆಗಳಲ್ಲಿ ಮಧ್ಯಸ್ಥಿಕೆ ಅಗತ್ಯ : ಸಿಎಂ ಬೊಮ್ಮಾಯಿ - ಅಮೆಜಾನ್​​​​ನೊಂದಿಗೆ ಸರ್ಕಾರ ಒಪ್ಪಂದ

ಒಂದು ಜಿಲ್ಲೆ, ಒಂದು ಉತ್ಪನ್ನ ಕಾರ್ಯಕ್ರಮದಡಿ ಸ್ಥಳೀಯ ಪ್ರತಿಭೆ ಮತ್ತು ಉತ್ಪನ್ನಗಳನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ. ಚನ್ನಪಟ್ಟಣದ ಗೊಂಬೆಗಳು, ಇಳಕಲ್ ಹಾಗೂ ಮೊಳಕಾಳ್ಮೂರು ಸೀರೆಗಳು, ಆಹಾರ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಿ ಆಧುನಿಕತೆಯ ಸ್ಪರ್ಶವನ್ನು ಒದಗಿಸಲು ಇದು ಸಹಕಾರಿಯಾಗಲಿದೆ..

CM Basavaraj Bommai
ಸಿಎಂ ಬೊಮ್ಮಾಯಿ

By

Published : Feb 5, 2022, 9:30 PM IST

ಬೆಂಗಳೂರು :ಬಡತನ ಹೋಗಲಾಡಿಸಲು ಆರ್ಥಿಕ ಚಟುವಟಿಕೆಗಳಲ್ಲಿ ಸರ್ಕಾರದ ಮಧ್ಯಪ್ರವೇಶ ಅಗತ್ಯ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆ ಹಾಗೂ ಅಮೆಜಾನ್​​​​ನೊಂದಿಗೆ ಇಂದು ನಡೆದ ಒಡಂಬಡಿಕೆಗೆ ಸಹಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ಸ್ಥಿತಿಯಲ್ಲಿ ಬಡತನ ನಮ್ಮ ಬಹುದೊಡ್ಡ ಶತ್ರು. ಗ್ರಾಮೀಣ ಜನರನ್ನು ಮೇಲೆತ್ತುವುದು ಮಾತ್ರವಲ್ಲ ಬಡತನವನ್ನು ನಾವು ಸೋಲಿಸಬೇಕಿದೆ. ಬಡಜನರಿಗೆ ಎಲ್ಲಾ ರೀತಿಯ ನೆರವಿನ ವ್ಯವಸ್ಥೆಯನ್ನು ಕಲ್ಪಿಸಿ ಅವರನ್ನು ಸಬಲರನ್ನಾಗಿಸಬೇಕಿದೆ ಎಂದರು.

ಈ ಒಪ್ಪಂದದಿಂದ ಬ್ರಾಂಡಿಂಗ್ ಹಾಗೂ ಉತ್ಪನ್ನಗಳ ಸಂಸ್ಕೃತಿಯ ವಿನಿಮಯ ಮಾಡುವ ದೊಡ್ಡ ಹೊಣೆಗಾರಿಕೆ ನಮ್ಮ ಮೇಲಿದೆ. ಪರಿವರ್ತನೆಯನ್ನು ನಾವು ಉಸಿರಾಗಿಸಿಕೊಳ್ಳಬೇಕು. ಉತ್ತಮ ಹಾಗೂ ಸುಸ್ಥಿರ ಮಾರುಕಟ್ಟೆಯೊಂದಿಗೆ ಕೌಶಲ್ಯ, ಅರ್ಹತೆ ಹಾಗೂ ಛಲವನ್ನು ಹೊಂದಿರುವ ಗ್ರಾಮೀಣ ಮಹಿಳೆಯರಿಗೆ ಉತ್ತಮವಾದ ಕಾರ್ಯ ವಿಧಾನದ ಅಗತ್ಯವಿದೆ ಎಂದರು.

ಈ ನಿಟ್ಟಿನಲ್ಲಿ ಸಂಜೀವಿನಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಇದರ ಯಶೋಗಾಥೆಯ ಮುಖಾಂತರ ಇತರೆ ಸಣ್ಣ ಉದ್ಯಮ ಹಾಗೂ ಚಟುವಟಿಕೆಗಳಿಗೆ ಇದೇ ಮಾದರಿ ಅನುಸರಿಸಲು ಸಾಧ್ಯವಾಗಲಿದೆ. ಕರ್ನಾಟಕ ರಾಜ್ಯವು ಪ್ರತಿಭೆ, ಉತ್ಪನ್ನ ಹಾಗೂ ಉದ್ಯಮಗಳಲ್ಲಿ ಪರಿಣಿತಿಯನ್ನು ಹೊಂದಿರುವ ರಾಜ್ಯವಾಗಿದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ಜನರಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಅಮೆಜಾನ್ ಸಂಸ್ಥೆ ಒಟ್ಟಾಗಿ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಬೇಕಿದೆ ಎಂದರು.

ಒಂದು ಜಿಲ್ಲೆ-ಒಂದು ಉತ್ಪನ್ನ:ಒಂದು ಜಿಲ್ಲೆ, ಒಂದು ಉತ್ಪನ್ನ ಕಾರ್ಯಕ್ರಮದಡಿ ಸ್ಥಳೀಯ ಪ್ರತಿಭೆ ಮತ್ತು ಉತ್ಪನ್ನಗಳನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ. ಚನ್ನಪಟ್ಟಣದ ಗೊಂಬೆಗಳು, ಇಳಕಲ್ ಹಾಗೂ ಮೊಳಕಾಳ್ಮೂರು ಸೀರೆಗಳು, ಆಹಾರ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಿ ಆಧುನಿಕತೆಯ ಸ್ಪರ್ಶವನ್ನು ಒದಗಿಸಲು ಇದು ಸಹಕಾರಿಯಾಗಲಿದೆ ಎಂದರು.

ಬಳಿಕ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥ್‌ ನಾರಾಯಣ ಮಾತನಾಡಿ, ಸಂಜೀವಿನಿ ಕಾರ್ಯಕ್ರಮದಡಿ ಮಾಡಿಕೊಂಡಿರುವ ಒಪ್ಪಂದ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಿದೆ ಎಂದರು.

ನಂತರ ಅಮೆಜಾನ್ ಸಂಸ್ಥೆಯ ಮುಖ್ಯಸ್ಥ ಚೇತನ್ ಕೃಷ್ಣಸ್ವಾಮಿ ಮಾತನಾಡಿ, ಸಣ್ಣ ಹಾಗೂ ಮಧ್ಯಮ ಉದ್ಯಮಗಳನ್ನು ಬೆಂಬಲಿಸಲು ಅಮೆಜಾನ್ ಬದ್ಧವಾಗಿದೆ. ರಾಜ್ಯದಲ್ಲಿ ಮಹಿಳೆಯರು ತಯಾರಿಸುವ ವಿಶಿಷ್ಟ ಉತ್ಪನ್ನಗಳಿಗೆ ಅತ್ಯುತ್ತಮ ಮಾರುಕಟ್ಟೆ ಒದಗಿಸಲು ಅಮೆಜಾನ್ ನೆರವು ನೀಡಲಿದೆ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿಂದು 12,009 ಮಂದಿಗೆ ಕೋವಿಡ್.. ​ಸೋಂಕಿನಿಂದ 50 ಮಂದಿ ಸಾವು

ABOUT THE AUTHOR

...view details