ಬೆಂಗಳೂರು: ಕೋವಿಡ್ ಟೆಸ್ಟಿಂಗ್ ಲ್ಯಾಬ್ ಕುರಿತಂತೆ ರಾಜ್ಯ ಸರ್ಕಾರ ತುಮಕೂರಿನ ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ನೀಡಿರುವ ನೋಟಿಸ್ಗೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ಧಾರ್ಥ ಕಾಲೇಜಿಗೆ ನೋಟಿಸ್ ನೀಡಿದ ಸರ್ಕಾರದ ಕ್ರಮಕ್ಕೆ ಜಿ. ಪರಮೇಶ್ವರ್ ಅಸಮಾಧಾನ - Siddhartha College
ತುಮಕೂರಿನ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ -19 ತಪಾಸಣೆಗಾಗಿ ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲಾಗುತ್ತಿದೆ. ಕೇವಲ 2 ಖಾಸಗಿ ಕಾಲೇಜುಗಳಿಗೆ ಮಾತ್ರ ನೋಟಿಸ್ ಕಳುಹಿಸುವ ಕ್ರಮವನ್ನು ನಾನು ಪ್ರಶ್ನಿಸುತ್ತೇನೆ ಎಂದು ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿರುವ ಅವರು, ತುಮಕೂರಿನ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ -19 ತಪಾಸಣೆಗಾಗಿ ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲಾಗುತ್ತಿದೆ ಎಂಬುದನ್ನು ಈ ಮೂಲಕ ತಿಳಿಸಲು ಇಚ್ಛಿಸುತ್ತೇನೆ. ಜೂನ್ 16 ರಂದು ಆದೇಶ ಸ್ವೀಕರಿಸಿದ ನಂತರ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಕೆಲವೇ ದಿನಗಳಲ್ಲಿ ಲ್ಯಾಬ್ ಸಿದ್ಧವಾಗಲಿದೆ. ಇಲ್ಲಿನ ಎರಡೂ ಆಸ್ಪತ್ರೆಗಳಲ್ಲಿ ತಲಾ 100 ಹಾಸಿಗೆಗಳನ್ನು ಹೊಂದಿರುವ ಕೋವಿಡ್ ಕೇರ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.
ಆದರೆ, ಕೇವಲ 2 ಖಾಸಗಿ ಕಾಲೇಜುಗಳಿಗೆ ಮಾತ್ರ ನೋಟಿಸ್ ಕಳುಹಿಸುವ ಕ್ರಮವನ್ನು ನಾನು ಪ್ರಶ್ನಿಸುತ್ತೇನೆ. ಉಳಿದವರಿಗೆ ಏಕಿಲ್ಲ? ಸಾಂಕ್ರಾಮಿಕ ರೋಗದ ನಡುವೆ ಸಣ್ಣ ರಾಜಕೀಯ ತಂತ್ರಗಳನ್ನು ಆಡಬೇಡಿ ಎಂದು ಸರ್ಕಾರವನ್ನು ವಿನಂತಿಸುತ್ತೇನೆ. ನಾವು ಎಲ್ಲಾ ಆದೇಶಗಳನ್ನು ಅನುಸರಿಸುತ್ತಿದ್ದೇವೆ. ಸಾರ್ವಜನಿಕರ ಸೇವೆಯನ್ನು ಎಂದಿನಂತೆ ನಿರಂತರವಾಗಿ ಮುಂದುವರಿಸುತ್ತೇವೆ ಎಂದಿದ್ದಾರೆ.