ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣವನ್ನು ಮೂರು ಹಂತದ ತನಿಖೆಗೆ ಒಳಪಡಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮನವಿ ಮಾಡಿದ್ದಾರೆ.
ಆರ್.ಟಿ.ನಗರದಲ್ಲಿರುವ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ ಅಬ್ದುಲ್ ಅಜೀಮ್, ಪ್ರಕರಣ ಸಂಬಂಧ ಚರ್ಚೆ ನಡೆಸಿದರು. ಮೊದಲನೇ ಹಂತದಲ್ಲಿ ಮ್ಯಾಜಿಸ್ಟೀರಿಯಲ್ ತನಿಖೆಯಿಂದ ಆಸ್ತಿ ಪಾಸ್ತಿ ನಷ್ಟ ಹಾಗೂ ಘಟನೆ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ. ಲೂಟಿ, ಬೆಂಕಿ ಹಚ್ಚಿರುವವರು ಎನ್ನುವ ಬಗ್ಗೆ ಎರಡನೇ ಹಂತದ ತನಿಖೆ ತಿಳಿಸುತ್ತೆ. ಇಡೀ ಘಟನೆಯ ಹಿಂದೆ ಯಾರಿದ್ದಾರೆ ಅನ್ನೋದು ಐಜಿಪಿ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಅವರು ವಿವರಿಸಿದರು.