ಕರ್ನಾಟಕ

karnataka

ETV Bharat / state

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ.. - ಐಎಎಸ್ ಅಧಿಕಾರಿ ಮೀನಾ ನಾಗರಾಜ್

ಈ ನೋಡಲ್ ಅಧಿಕಾರಿಗಳು ಬೇರೆ ದೇಶದಲ್ಲಿ ಸಿಲುಕಿರುವ ಕರ್ನಾಟಕ ಮೂಲದ ಉದ್ಯೋಗಿಗಳು, ವಿದ್ಯಾರ್ಥಿಗಳನ್ನು ಮತಳಿ ಕರೆತರುವ ನಿಟ್ಟಿನಲ್ಲಿ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Karnataka government
ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ

By

Published : May 5, 2020, 3:23 PM IST

ಬೆಂಗಳೂರು :ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಳ್ಳಲು ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದೀಗ ರಾಜ್ಯ ಸರ್ಕಾರ ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆಸುವ ಸಂಬಂಧ ಇಬ್ಬರು ‌ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.

ರಾಜ್ಯ ಸರ್ಕಾರ ಈ ಸಂಬಂಧ ಐಎಎಸ್ ಅಧಿಕಾರಿ ಮೀನಾ ನಾಗರಾಜ್ ಹಾಗೂ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್​ರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ

ವಿದೇಶದಲ್ಲಿರುವ ಕನ್ನಡಿಗ ಉದ್ಯೋಗಿಗಳು, ವಿದ್ಯಾರ್ಥಿಗಳನ್ನು ವಾಪಸ್‌ ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯದ ನೋಡಲ್ ಅಧಿಕಾರಿಗಳು ಕೇಂದ್ರ ಸರ್ಕಾರದ ನೋಡಲ್ ಅಧಿಕಾರಿಗಳ ಜೊತೆ ಸಮನ್ವಯತೆ‌ ಸಾಧಿಸಲಿದ್ದಾರೆ.

ಈ ನೋಡಲ್ ಅಧಿಕಾರಿಗಳು ಬೇರೆ ದೇಶದಲ್ಲಿ ಸಿಲುಕಿರುವ ಕರ್ನಾಟಕ ಮೂಲದ ಉದ್ಯೋಗಿಗಳು, ವಿದ್ಯಾರ್ಥಿಗಳನ್ನು ಮತಳಿ ಕರೆತರುವ ನಿಟ್ಟಿನಲ್ಲಿ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ABOUT THE AUTHOR

...view details