ಬೆಂಗಳೂರು: ರಾಜ್ಯದ 11,136 ಸ್ವಚ್ಛತಾ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಎರಡನೇ ಮತ್ತು ಮೂರನೇ ಹಂತಗಳಲ್ಲಿ ಮತ್ತು ನಗರದ ಹೊರಗೆ ಕೆಲಸ ಮಾಡುವ ಇತರರನ್ನು ಪರಿಗಣಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಸ್ವಚ್ಛತಾ ಕಾರ್ಮಿಕರ ಖಾಯಂಗೊಳಿಸಲು ಅಧಿಸೂಚನೆ: ಸಿಎಂ ಬೊಮ್ಮಾಯಿ - ಸರ್ಕಾರ ರಚಿಸಿದ್ದ ಸಮಿತಿಯ ಶಿಫಾರಸ್ಸಿನ ಆಧಾರ
ಸೇವೆ ಖಾಯಂಗೊಳಿಸುವ ಕುರಿತು ಅಧ್ಯಯನ ನಡೆಸಲು ಸರ್ಕಾರ ರಚಿಸಿದ್ದ ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ ಸ್ವಚ್ಛತಾ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ದಲಿತರು ಮತ್ತು ಶೋಷಿತ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಮುಖ್ಯ ಧ್ಯೇಯ. ಆದ್ದರಿಂದ ಇದರ ಬಗ್ಗೆ ಅಧ್ಯಯನಕ್ಕಾಗಿ ಸರ್ಕಾರ ರಚಿಸಿದ್ದ ಸಮಿತಿಯ ಶಿಫಾರಸಿನಂತೆ ಸ್ವಚ್ಛತಾ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ. ನೈರ್ಮಲ್ಯ ಕಾರ್ಮಿಕರ ಅಪಾಯ ನಿಧಿಯನ್ನೂ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ವ್ಯಾಜ್ಯಗಳ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆಗೆ ಸರ್ಕಾರ ಸಿದ್ಧ: ಸಿಎಂ ಬೊಮ್ಮಾಯಿ