ಕರ್ನಾಟಕ

karnataka

By

Published : Nov 9, 2021, 8:35 PM IST

ETV Bharat / state

ನ.11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಿಸಲು ಸರ್ಕಾರದ ಆದೇಶ

ಒನಕೆ ಓಬವ್ವರ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದು, ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ರಹನುಮಪ್ಪನ ಹೆಂಡತಿಯಾಗಿದ್ದರು.

Govt order to celebrate onake obavva Jayanthi
Govt order to celebrate onake obavva Jayanthi

ಬೆಂಗಳೂರು: ನ.11ರಂದು ಒನಕೆ ಓಬವ್ವ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲು ಸರ್ಕಾರ ಆದೇಶಿಸಿದೆ.

ಒನಕೆ ಓಬವ್ವರ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದು, ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ರಹನುಮಪ್ಪನ ಹೆಂಡತಿಯಾಗಿದ್ದರು.ಚಿತ್ರದುರ್ಗದ ಮೇಲೆ ಹೈದರಾಲಿಯ ಸೈನಿಕರು ಹಟತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು.

ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೆ ಕೊಂದಿದ್ದಳು. ಕೊನೆಯಲ್ಲಿ ಎದುರಾಳಿಯು ಬೆನ್ನ ಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾಳು.

ಪ್ರಸ್ತುತ ಆ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಜನಕೆ ಓಬವ್ವನ ಕ್ರೀಡಾಂಗಣ ಎಂದು ಹೆಸರನ್ನಿಟ್ಟು ಗೌರವಿಸಲಾಗಿದೆ. ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನು ಆಚರಣೆ ಮಾಡುವಂತೆ ಇದೀಗ ತೀರ್ಮಾನಿಸಲಾಗಿದೆ.

ABOUT THE AUTHOR

...view details