ಕರ್ನಾಟಕ

karnataka

By

Published : Nov 21, 2022, 10:08 PM IST

ETV Bharat / state

ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರದ ಆದೇಶ

ಕಾಡಾನೆ ಹಾವಳಿ ಹೆಚ್ಚಳವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸರ್ಕಾರಿ ಆದೇಶದಲ್ಲಿ ಸೂಚಿಸಲಾಗಿದೆ.

KN_BNG
ಬಸವರಾಜ್​ ಬೊಮ್ಮಾಯಿ

ಬೆಂಗಳೂರು: ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ.

ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಟಾಸ್ಕ್ ಫೋರ್ಸ್​ಗಳನ್ನು ತಕ್ಷಣದಿಂದಲೇ ರಚಿಸಿ ಕಾರ್ಯಪ್ರವೃತ್ತರಾಗಬೇಕಿದ್ದು, ಆಯಾ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕಾರ್ಯನಿರ್ವಹಣೆ ಹೇಗೆ?:ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುಗುವುದು, ಜನವಸತಿ, ಕೃಷಿ ಪ್ರದೇಶ ಹಾಗೂ ಕಾಫಿ ಎಸ್ಟೇಟ್​ಗಳಲ್ಲಿ ಆನೆಗಳ ಚಲನವಲನ ಗುರುತಿಸಿ ಅರಣ್ಯಕ್ಕೆ ಆನೆಗಳನ್ನು ಹಿಮ್ಮೆಟ್ಟಿಸುವುದು ಮುಂತಾದ ಕಾರ್ಯಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕೈಗೊಳ್ಳಬೇಕು. ಕಾಡಾನೆ ಹಾವಳಿ ಕಂಡುಬರುವ ಸ್ಥಳಗಳಲ್ಲಿ ಆನೆಗಳ ಚಲನವಲನಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಅರಣ್ಯ ಪ್ರದೇಶದೊಳಗೆ ಸಂಚರಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.

ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರಸ್ಥಾನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ದೂರವಾಣಿ ಸಂಖ್ಯೆಯನ್ನು ಪ್ರಚಾರಪಡಿಸಬೇಕು. ಆನೆಗಳನ್ನು ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಇನ್ನಿತರೆ ಅವಶ್ಯಕ ಸಲಕರಣೆಗಳನ್ನು ಅರಣ್ಯ ಪಡೆ ಮುಖ್ಯಸ್ಥರು ಒದಗಿಸಬೇಕು. ಅರಣ್ಯ ಪಡೆ ಮುಖ್ಯಸ್ಥರು ಜಿಲ್ಲಾ ಟಾಸ್ಕ್ ಫೋರ್ಸ್​ಗೆ ವಲಯ ಅರಣ್ಯಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ರಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಿ ಕೂಡಲೇ ಆದೇಶ ಹೊರಡಿಸಬೇಕು.

ಆನೆ ಹಾವಳಿ ಪ್ರದೇಶಗಳಿಗೆ ಕೂಡಲೇ ತಲುಪಲು ಅನುಕೂಲವಾಗುವಂತೆ ಪ್ರತಿ ಜಿಲ್ಲಾ ಟಾಸ್ಕ್ ಪ್ಫೋರ್ಸ್​ಗೆ ಮೂರು ಬೊಲೆರೋ ಜೀಪ್​ಗಳನ್ನು ಒದಗಿಸುವುದು ಹಾಗೂ ಕ್ಯಾಂಟರ್ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನಿಯೋಜಿಸಬೇಕು ಆನೆಗಳನ್ನು ಹಿಮ್ಮೆಟ್ಟಿಸುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸಹಾಯ ಪಡೆಯಬೇಕು.

ಇದನ್ನೂ ಓದಿ:ಹಾಲಿನ‌ ದರ ಏರಿಕೆಯಿಂದ ರೈತರಿಗೆ, ಗ್ರಾಹಕರಿಗೆ ಸಮಸ್ಯೆ ಆಗಬಾರದೆಂದು ಕೆಎಂಎಫ್​ಗೆ ಸೂಚನೆ: ಸಿಎಂ ಬೊಮ್ಮಾಯಿ‌

ABOUT THE AUTHOR

...view details