ಕರ್ನಾಟಕ

karnataka

ETV Bharat / state

ಹೊಸ ವರ್ಷಕ್ಕೆ ಬಿಪಿಎಲ್ ಫಲಾನುಭವಿಗಳಿಗೆ ಸಿಹಿಸುದ್ದಿ : ಹೆಚ್ಚುವರಿ 1 ಕೆಜಿ ಅಕ್ಕಿ ವಿತರಿಸಲು ಸರ್ಕಾರ ಆದೇಶ - ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹತ್ತು ಕೆಜಿ ಅಕ್ಕಿ

ಬಿಪಿಎಲ್ ಫಲಾನುಭವಿಗಳಿಗೆ ಗುಡ್​ ನ್ಯೂಸ್​- ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 5 ಕೆಜಿ ಪಡಿತರ ಜತೆ 1 ಕೆ ಜಿ ಹೆಚ್ಚುವರಿ ಅಕ್ಕಿ- ಸರ್ಕಾರದಿಂದ ಘೋಷಣೆ

BPL Ration Card
ಬಿಪಿಎಲ್ ಪಡಿತರ ಚೀಟಿ

By

Published : Jan 3, 2023, 5:21 PM IST

ಬೆಂಗಳೂರು: ಹೊಸ ವರ್ಷಕ್ಕೆ ಬಿಪಿಎಲ್ ಪಡಿತರದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಕೊಟ್ಟಿದ್ದು, ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಕುಟುಂಬಗಳಿಗೆ (ಬಿಪಿಎಲ್ ಪಡಿತರದಾರರಿಗೆ) 1 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ 5 ಕೆ.ಜಿ. ಅಕ್ಕಿಯನ್ನು ಪ್ರತಿ ತಿಂಗಳು ವಿತರಣೆ ಮಾಡಲಾಗುತ್ತಿತ್ತು.

ಇದೀಗ 1 ಕೆಜಿ ಹೆಚ್ಚುವರಿ ಅಕ್ಕಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲು ಆದೇಶ ಹೊರಡಿಸಲಾಗಿದೆ. ಜನವರಿ 1 ರಿಂದ ಈ ಆದೇಶ ಜಾರಿಗೊಳ್ಳಲಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಮಯದಲ್ಲಿ ಸರ್ಕಾರ ಈ ಆದೇಶ ಹೊರಡಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹತ್ತು ಕೆಜಿ ಅಕ್ಕಿ ಪಡಿತರದಾರರಿಗೆ ವಿತರಿಸಲಾಗುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸಮಾವೇಶವೊಂದರಲ್ಲಿ ಹೇಳಿಕೆ ಕೊಟ್ಟಿದ್ದರು. ಇದರ ಬೆನ್ನಲ್ಲೇ 5 ಕೆಜಿ ಪಡಿತರ ಜತೆ 1 ಕೆಜಿ ಹೆಚ್ಚುವರಿ ಅಕ್ಕಿ ನೀಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂಓದಿ:ಭತ್ತ ಖರೀದಿ ಮಾಡಿದ ರೈತರಿಗೆ ಹಣ ನೀಡದೇ 37 ಕೋಟಿ ಪಂಗನಾಮ ಆರೋಪ.. ಅನ್ನದಾತರ ಆಕ್ರೋಶ

ABOUT THE AUTHOR

...view details