ಬೆಂಗಳೂರು:ಬಜೆಟ್‌ನಲ್ಲಿ ಘೋಷಣೆಯಾದ ಇಪ್ಪತ್ತು ದಿನಗಳಲ್ಲಿ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. 2022-23 ನೆ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈನುಗಾರಿಕೆ ಚಟುವಟಿಕೆಗಳಿಗೆ ನೆರವಾಗಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವುದಾಗಿ ಪ್ರಕಟಿಸಿದ್ದರು. ಈ ಯೋಜನೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ಮತ್ತು ಸರ್ಕಾರ 100 ಕೋಟಿ ಷೇರು ಬಂಡವಾಳ ಒದಗಿಸಲಿದೆ ಎಂದು ಬಜೆಟ್‌ನಲ್ಲಿ ಘೋಷಿಸಿದ್ದರು. ಅದರಂತೆ ಸರ್ಕಾರ ಈ ಆದೇಶ ಹೊರಡಿಸಿದೆ.
ಮುಂಬರುವ ದಿನಗಳಲ್ಲಿ ಈ ಯೋಜನೆಯಡಿ ಪ್ರತಿ ತಾಲೂಕಿಗೆ ಒಂದು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಭವಿಷ್ಯದಲ್ಲಿ 20 ಸಾವಿರ ಕೋಟಿ ವಾರ್ಷಿಕ ವಹಿವಾಟು ಗುರಿಯನ್ನು ಹೊಂದಲಾಗಿದೆ. ಈ ಮೂಲಕ ಅಪೆಕ್ಸ್ ಬ್ಯಾಂಕ್‌ಗೆ ಸರಿಸಮನಾಗಿ ಇದನ್ನು ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆ ಸರ್ಕಾರದ್ದಾಗಿದೆ.