ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯದೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸ್ ಆಗಿದ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ.
ಕೋವಿಡ್19 ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗೆ ವಿನಾಯ್ತಿ ನೀಡಲಾಗಿತ್ತು. ಹಿಂದಿನ ತರಗತಿಯ ಪರೀಕ್ಷೆಯ ಅಂಕಗಳ ಮಾನದಂಡದಲ್ಲಿ ಪಾಸ್ ಮಾಡಲಾಗಿತ್ತು. ಇಂತಹ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ಧನ ನೀಡೋದಕ್ಕೆ ಇದೀಗ ರಾಜ್ಯ ಸರ್ಕಾರ ನಿರ್ಧರಿಸಿ ಆದೇಶಿಸಿದೆ. ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಹೊರಡಿಸಿರುವ ತಿದ್ದುಪಡಿ ಆದೇಶದಲ್ಲಿ ಈ ಮಾಹಿತಿ ಒದಗಿಸಲಾಗಿದೆ.