ಕರ್ನಾಟಕ

karnataka

ETV Bharat / state

ನೋಂದಣಿ- ಮುದ್ರಾಂಕ ಇಲಾಖೆಯ ಅಧಿಕಾರಿಗಳ ವರ್ಗಾವಣೆ - ರಾಜ್ಯ ಸರ್ಕಾರ ಆದೇಶ

ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ
ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

By

Published : Jul 14, 2020, 7:13 AM IST

ಬೆಂಗಳೂರು: ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲಾ ನೋಂದಣಾಧಿಕಾರಿಗಳೂ ಸೇರಿದಂತೆ ವಿವಿಧ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವಿವಿಧ ಹುದ್ದೆಗಳಿಗೆ ಕೂಡಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

ಬೆಂಗಳೂರಿನ ನೋಂದಣಿ ಮಹಾ ಪರಿವೀಕ್ಷಕ, ಮುದ್ರಾಂಕಗಳ ಆಯುಕ್ತರ ಕಚೇರಿಯ ಕಾನೂನು ಅಧಿಕಾರಿ ಬಿ.ಎಸ್. ಶ್ರೀಧರ್ ಅವರನ್ನು ರಾಮನಗರದಲ್ಲಿ ಖಾಲಿ ಇರುವ ಜಿಲ್ಲಾ ನೋಂದಣಿ ಕಚೇರಿಗೆ ವರ್ಗಾಯಿಸಲಾಗಿದೆ. ಅದೇ ರೀತಿ, ಚಿಕ್ಕಬಳ್ಳಾಪುರ ಜಿಲ್ಲಾ ನೋಂದಣಾಧಿಕಾರಿ ಯಶೋಧರಾ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್. ಶ್ರೀಧರ್ ಅವರ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ವರ್ಗಾಯಿತ ಅಧಿಕಾರಿಗಳು ಕೂಡಲೇ ವರ್ಗಾವಣೆಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು. ಕೋರಿಕೆ ಮೇರೆಗೆ ವರ್ಗಾವಣೆ ಆಗಿರುವುದರಿಂದ ಜಿಲ್ಲಾಧಿಕಾರಿಗಳು ವರ್ಗಾವಣೆ ಭತ್ಯೆ/ ಮತ್ತಿತರೆ ಭತ್ಯೆಗಳಿಗೆ ಅರ್ಹರಿರುವುದಿಲ್ಲ ಎಂದು ಕಂದಾಯ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಕೆ. ಉಮಾಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪನೋಂದಣಾಧಿಕಾರಿ ವರ್ಗಾವಣೆ:
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 26 ಮಂದಿ ಹಿರಿಯ ಉಪ ನೋಂದಣಾಧಿಕಾರಿಗಳನ್ನು ಸಾರ್ವಜನಿಕ ಆಡಳಿತಾತ್ಮಕ ದೃಷ್ಟಿಯಿಂದ ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಅದೇ ರೀತಿ ಇದೇ ಸಂದರ್ಭ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 13 ಮಂದಿ ಉಪನೋಂದಣಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಮಂದಿ ಪ್ರಥಮ ದರ್ಜೆ, 35 ಮಂದಿ ದ್ವಿತೀಯ ದರ್ಜೆ ಸಹಾಯಕರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ABOUT THE AUTHOR

...view details