ಬೆಂಗಳೂರು: ರಾಜ್ಯ ಸರ್ಕಾರ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ಕೆಎಸ್ಆರ್ಪಿ ಐಜಿಪಿಯಾಗಿ ನೇಮಿಸಿದೆ. ಇವರಿಂದ ತೆರವಾದ ಹುದ್ದೆಗೆ ಬೆಳಗಾವಿ ಉತ್ತರ ವಲಯ ಐಜಿಯಾಗಿದ್ದ ಸತೀಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಅಭಿವೃದ್ಧಿ ನಿಗಮದ ಎಡಿಜಿಪಿಯಾಗಿ ಡಾ. ಕೆ. ರಾಮಚಂದ್ರ ರಾವ್, ರಾಜ್ಯ ಬಂಧೀಖಾನೆ ಇಲಾಖೆಯ ಎಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ರಾಜ್ಯ ನಾಗರೀಕ ಹಕ್ಕುಗಳ ನಿರ್ದೇಶನಾಲಯದ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿಯಾಗಿ ಮನೀಶ್ ಖರ್ಬಿಕರ್, ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ಎಂ.ಚಂದ್ರಶೇಖರ್, ಬೆಂಗಳೂರು ನಗರ ಪೂರ್ವ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ವಿಪುಲ್ ಕುಮಾರ್, ಸಿಐಡಿ ಐಜಿಪಿಯಾಗಿ ಪ್ರವೀಣ್ ಮಧುಕರ್ ಪವಾರ್, ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವಿಕಾಸ್ ಕುಮಾರ್ ವಿಕಾಸ್, ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ರಮಣ್ ಗುಪ್ತ, ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿ ಐಜಿಪಿಯಾಗಿ ಎಸ್.ಎನ್. ಸಿದ್ದರಾಮಪ್ಪ, ಬೆಂಗಳೂರು ದಕ್ಷಿಣ ವಲಯ ಡಿಐಜಿಯಾಗಿ ಎಂ.ಬಿ.ಬೋರಲಿಂಗಯ್ಯ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿಯಾಗಿ ಸಿ.ವಂಶಿಕೃಷ್ಣ ಹಾಗೂ ಸಿ.ಬಿ. ರಿಷ್ಯಂತ್ ಅವರನ್ನು ಮಂಗಳೂರು ಎಸ್ಪಿಯಾಗಿ ವರ್ಗಾವಣೆಯಾಗಿದೆ. ಸಂಜೆಯೊಳಗೆ ಎಸ್ಪಿಗಳ ಮಟ್ಟದಲ್ಲಿ ಅಧಿಕಾರಿಗಳು ವರ್ಗಾವಣೆ ಆದೇಶ ಬರುವ ಸಾಧ್ಯತೆಯಿದೆ.
ಡಿಸಿಎಂ ಡಿಕೆಶಿ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ ನಾಗರಾಜ್ ನೇಮಕ :ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ ಟಿ ನಾಗರಾಜ್ ನೇಮಕಗೊಂಡಿದ್ದಾರೆ. ಕೆ.ಟಿ ನಾಗರಾಜ್, ಬಿಬಿಎಂಪಿ ನಿವೃತ್ತ ಚೀಫ್ ಎಂಜಿನಿಯರ್ ಆಗಿದ್ದಾರೆ. ಪಾಲಿಕೆ ತಾಂತ್ರಿಕ ವಿಭಾಗದಲ್ಲಿ ಸಿಇ ಆಗಿದ್ದ ಕೆ.ಟಿ ನಾಗರಾಜ್ ತಕ್ಷಣದಿಂದ ಉಪ ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ. ರಾಜ್ಯಪಾಲರ ಆದೇಶದ ಅನುಸಾರ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ವಿ ಅಶೋಕ್ ಈ ಆದೇಶ ಹೊರಡಿಸಿದ್ದಾರೆ.