ಕರ್ನಾಟಕ

karnataka

ETV Bharat / state

ವಿಧಾನಮಂಡಲ ಅಧಿವೇಶನ: ಸುವರ್ಣಸೌಧದಲ್ಲಿ ಕಚೇರಿ ಕೊಠಡಿ ಹಂಚಿಕೆ ಮಾಡಿ ಆದೇಶ - ಈಟಿವಿ ಭಾರತ ಕನ್ನಡ

ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಡಿ.30 ವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ.

KN_BNG
ಸುವರ್ಣಸೌಧ

By

Published : Dec 9, 2022, 10:39 PM IST

Updated : Dec 9, 2022, 10:57 PM IST

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು ಮುಖ್ಯಮಂತ್ರಿ, ಸಚಿವರು ಹಾಗೂ ಸಚಿವಾಲಯದ ಅಧಿಕಾರಿಗಳಿಗೆ ಕಚೇರಿ ಕೊಠಡಿಗಳನ್ನು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವ ಕಚೇರಿಗಳು ಬೆಳಗಾವಿ ಅಧಿವೇಶನ (ಡಿ.19 ರಿಂದ ಡಿ.30 ವರೆಗೆ) ನಡೆಯುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸುವರ್ಣಸೌಧಕ್ಕೆ ಸ್ಥಳಾಂತರವಾಗಲಿವೆ. ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ 28 ಮಂದಿ ಸಚಿವರು, ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಸೇರಿದಂತೆ 43 ಮಂದಿ ಅಧಿಕಾರಿಗಳಿಗೆ ಕಚೇರಿ ಕೊಠಡಿಗಳನ್ನು ಹಂಚಲಾಗಿದೆ.

ಇದನ್ನೂ ಓದಿ:ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಆದೇಶ

Last Updated : Dec 9, 2022, 10:57 PM IST

ABOUT THE AUTHOR

...view details