ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ ಮಾಡಿದೆ. 17 ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದೆ.
ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಅನಿಲ್ ಕುಮಾರ್ ಟಿ. ಕೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಪ್ರಸಾದ್ ಎನ್. ವಿ ಅವರಿಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಪ್ರಭಾರಿ ಹೊಣೆ ನೀಡಲಾಗಿದೆ.
ಜಯರಾಂ ಎನ್ ಅವರಿಗೆ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಪ್ರಭಾರಿ ನೀಡಲಾಗಿದೆ. ಬಗಾದಿ ಗೌತಮ್‌ರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಶ್ರೀವಿದ್ಯಾರನ್ನು ಇ-ಆಡಳಿತ ಕೇಂದ್ರದ ಸಿಇಒರನ್ನಾಗಿ ವರ್ಗಾಯಿಸಲಾಗಿದೆ.
ರಮೇಶ್ ಡಿ. ಎಸ್ ಅವರನ್ನು ಚಾಮರಾಜನಗರ ಡಿಸಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಗೋಪಾಲ್ ಕೃಷ್ಣರನ್ನು ಮಂಡ್ಯ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಜಾನಕಿ ಕೆ.ಎಂರನ್ನು ಸಕಾಲದ ಅಪರ ಮಿಷನ್ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ರಾಜೇಂದ್ರ ಕೆ. ವಿಯನ್ನು ಮೈಸೂರು ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಸ್ವತಿ ಎಸ್ ಅವರನ್ನು ಪಶು ಸಂಗೋಪನೆ ಹಾಗೂ ಪಶು ವೈದ್ಯ ಸೇವೆ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಮುಳ್ಳೈ ಮುಹಿಲನ್ ಅವರರನ್ನು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಪ್ರಭುಲಿಂಗ್ ಕಾವಲಿಕಟ್ಟಿರನ್ನು ಉತ್ತರ ಕನ್ನಡ ಜಿಲ್ಲೆಯ ಡಿಸಿಯನ್ನಾಗಿ ವರ್ಗಾಯಿಸಲಾಗಿದೆ.
ಎಂ.ಎಸ್.ದಿವಾಕರರನ್ನು ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒರನ್ನಾಗಿ ವರ್ಗಾವಣೆ ಮಾಡಲಾಗಿದೆ. ದಿವ್ಯ ಪ್ರಭುರನ್ನು ಚಿತ್ರದುರ್ಗ ಜಿಲ್ಲೆಯ ಡಿಸಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ನಳಿನಿ ಅತುಲ್ ರನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷರನ್ನಾಗಿ ವರ್ಗಾಯಿಸಲಾಗಿದೆ.
ರಘುನಂದನ್ ಮೂರ್ತಿಯನ್ನು ಹಾವೇರಿ ಜಿಲ್ಲೆಯ ಡಿಸಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಡಾ. ಕುಮಾರರಿಗೆ ದ. ಕನ್ನಡ ಜಿಲ್ಲೆಯ ಪ್ರಭಾರಿ ಹೊಣೆ ನೀಡಲಾಗಿದೆ. ಭನ್ವರ್ ಸಿಂಗ್ ಮೀನಾರನ್ನು ಕೆಪಿಎಸ್ಸಿಯ ಪರೀಕ್ಷಾ ನಿಯಂತ್ರಣಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ. ಪ್ರಕಾಶ್ ನಿಟ್ಟಾಲಿರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಆಕಾಶ್. ಎಸ್ ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಒರನ್ನಾಗಿ ವರ್ಗಾಯಿಸಲಾಗಿದೆ.
ಇದನ್ನೂ ಓದಿ:ಪಿಎಂ ಗತಿಶಕ್ತಿ ಯೋಜನೆ ದೇಶವನ್ನು ಟ್ರಿಲಿಯನ್ ಆರ್ಥಿಕತೆಯಾಗಿ ರೂಪಿಸಲಿದೆ: ಕಪಿಲ್ ಮೋಹನ್