ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಡಿಸೆಂಬರ್ 27 ರಿಂದ 29 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಲು ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ನೀಡಲಾಗಿತ್ತು. ಇದುವರೆಗೂ, 1.17 ಕೋಟಿ ಮಹಿಳಾ ಕುಟುಂಬಗಳ ಮುಖ್ಯಸ್ಥರು, ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಪ್ರತಿ ತಿಂಗಳು ಅವರುಗಳ ಬ್ಯಾಂಕ್ ಖಾತೆಗೆ 2,000 ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುತ್ತಿದೆ.
ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಚಿಸಿರುವುದು ಗಮನಕ್ಕೆ ಬಂದಿದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿದೆ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಡಿ. 27 ರಿಂದ 29 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಸುತ್ತೋಲೆಯಲ್ಲಿ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
1. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಬೇಕು.
2. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸಬೇಕು.