ಬೆಂಗಳೂರು:ರಾಜ್ಯದಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿರುವುದರಿಂದ 2018-19 ನೇ ಸಾಲಿನ ಬೆಳಗಾವಿ ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳ ಘಟಕ ಒಳಗಿನ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡುವಂತೆ ಸೂಚಿಸಲಾಗಿದೆ.
ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ಮುಂದೂಡುವಂತೆ ಸೂಚನೆ
ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿರುವುದರಿಂದ ಶಿಕ್ಷಕರ ವರ್ಗಾವಣೆಯನ್ನ ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ
ಶಿಕ್ಷಕರ ವರ್ಗಾವಣೆಯನ್ನ ಆಗಸ್ಟ್ 5 ರಿಂದ 8 ರವರೆಗೆ ಹಮ್ಮಿಕೊಳ್ಳಲಾಗಿತ್ತು. ಆದರೆ ಈಗ ಪ್ರೌಢಶಾಲಾ ಸಹ ಶಿಕ್ಷಕರ ಘಟಕದೊಳಗಿನ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂದಿನ ವರ್ಗಾವಣೆ ಕೌನ್ಸೆಲಿಂಗ್ ದಿನಾಂಕವನ್ನು ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಈ ವಿಷಯವನ್ನು ವಿಭಾಗದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸುವಂತೆ ತಿಳಿಸಲಾಗಿದೆ.