ಬೆಂಗಳೂರು :ಲಾಕ್ಡೌನ್ ಸಂದರ್ಭದಲ್ಲಿ ಆದಾಯವಿಲ್ಲದೆ ಸಂಕಷ್ಟ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಘೋಷಣೆ ಮಾಡಿದ್ದ 40 ಕೋಟಿ ರೂ. ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
ರೈತರು, ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಿದಂತೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 5 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದರು. ಒಂದು ಲಕ್ಷ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಚಾಲಕರು ನೋಂದಣಿ ಮಾಡಿಕೊಂಡಿದ್ದು, ಇನ್ನೂ 6.75 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರು ನೊಂದಾಯಿಸುವ ನಿರೀಕ್ಷೆ ಇದೆ. ಈ ಯೋಜನೆಗಾಗಿ 40 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.