ಕರ್ನಾಟಕ

karnataka

ETV Bharat / state

ರೈತರಿಗೆ ರಸಗೊಬ್ಬರ ಪೂರೈಸಲು ಸರ್ಕಾರ ಕ್ರಮ ಕೈಗೊಳ್ಳಬೇಕು: ಕುಮಾರಸ್ವಾಮಿ ಆಗ್ರಹ - ರಾಜ್ಯದಲ್ಲಿ ರಸಗೊಬ್ಬರದ ಕೊರತೆ

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಕೊರತೆ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸರ್ಕಾರ ಸಮರ್ಪಕವಾಗಿ ಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Kumaraswamy
Kumaraswamy

By

Published : Aug 20, 2020, 1:37 PM IST

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ, ರಾಜ್ಯದ ರೈತರಿಗೆ ರಸಗೊಬ್ಬರ ವಿಶೇಷವಾಗಿ ಯೂರಿಯಾವನ್ನು ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಕೊರತೆ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಆಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದೆ ರೈತರು ಹಿಡಿಶಾಪ ಹಾಕುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿ ಟ್ವೀಟ್

ವಾಡಿಕೆಗಿಂತ ಈ ಬಾರಿ ರಾಜ್ಯದಲ್ಲಿ ಶೇ. 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ. ಬಾಯಿ ಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರದ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತಾಗಿ ಸೂಕ್ತ ವ್ಯವಸ್ಥೆ ಮಾಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ABOUT THE AUTHOR

...view details