ಕರ್ನಾಟಕ

karnataka

ETV Bharat / state

ಉಪಲೋಕಾಯುಕ್ತರ ಹುದ್ದೆಗೆ ನೇಮಕ ಪ್ರಕ್ರಿಯೆ ಆರಂಭಿಸಿದ ಸರ್ಕಾರ : ಹೈಕೋರ್ಟ್​​ಗೆ ಅನುಪಾಲನಾ ವರದಿ - ಹೈಕೋರ್ಟ್​​ಗೆ ಅನುಪಾಲನಾ ವರದಿ ಸಲ್ಲಿಸಿದ ಸರ್ಕಾರ

ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್ ಆನಂದ್ ಅವರು ಕಳೆದ ವರ್ಷದ ಡಿ.16ರಂದು ನಿವೃತ್ತರಾಗಿದ್ದಾರೆ. ಈ ಸಂಬಂಧ ಅವರ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಜ.27ರಂದು ಹೈಕೋರ್ಟ್ ಆದೇಶಿಸಿತ್ತು..

High Court
ಹೈಕೋರ್ಟ್

By

Published : Oct 15, 2021, 4:02 PM IST

ಬೆಂಗಳೂರು :ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​ಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ.

ಅರ್ಜಿದಾರ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜ.27ರಂದು ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಸರ್ಕಾರ ಕೈಗೊಂಡ ನಿರ್ಧಾರವನ್ನು ಲಿಖಿತವಾಗಿ ಸಲ್ಲಿಸಲು 3 ವಾರ ಕಾಲಾವಕಾಶ ನೀಡಬೇಕೆಂದು ಸರ್ಕಾರ ಮನವಿ ಮಾಡಿದೆ. ಪ್ರಕರಣದ ವಿಚಾರಣೆಯನ್ನು ನ.8ಕ್ಕೆ ನಿಗದಿಪಡಿಸಲಾಗಿದೆ.

ಅನುಪಾಲನಾ ವರದಿ ಸಾರಾಂಶ :ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್ ಆನಂದ್ ಅವರು ಕಳೆದ ವರ್ಷದ ಡಿ.16ರಂದು ನಿವೃತ್ತರಾಗಿದ್ದಾರೆ. ಈ ಸಂಬಂಧ ಅವರ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಜ.27ರಂದು ಹೈಕೋರ್ಟ್ ಆದೇಶಿಸಿತ್ತು.

ಕೋವಿಡ್ ಸಂದರ್ಭದಲ್ಲಿ ಇಡೀ ಆಡಳಿತ ಯಂತ್ರವನ್ನು ಕೊರೊನಾ ವೈರಸ್ ನಿಯಂತ್ರಿಸಲು ನಿಯೋಜಿಸಿದ್ದರಿಂದ ನ್ಯಾಯಾಲಯದ ಆದೇಶ ಪಾಲಿಸಲು ಸಾಧ್ಯವಾಗಿರಲಿಲ್ಲ. ಉಪ ಲೋಕಾಯುಕ್ತರನ್ನು ನೇಮಿಸುವ ಪ್ರಕ್ರಿಯೆ ಆರಂಭಿಸಿರುವುದರಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು ಎಂದು ಮನವಿ ಮಾಡಿದೆ.

ಇದಕ್ಕೂ ಮುನ್ನ ನಡೆದಿದ್ದ ವಿಚಾರಣೆ ಸಂದರ್ಭದಲ್ಲಿ ಉಪಲೋಕಾಯುಕ್ತರನ್ನು ನೇಮಿಸಲು ನ್ಯಾಯಾಲಯ ಆದೇಶಿಸಿದ ನಂತರವೂ ಕಾರ್ಯ ಪ್ರವೃತ್ತರಾಗದ ಹಿನ್ನೆಲೆ ಹೈಕೋರ್ಟ್ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪಿ.ಹೇಮಲತಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಿತ್ತು. ಇದೀಗ ಸರ್ಕಾರ ಅದನ್ನು ಕೈಬಿಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: ನೀವು ಒಂದು ಕುಟುಂಬ ಹಿನ್ನೆಲೆ ಗಾಯಕರಾಗಿದ್ದೀರಿ : ಸಿದ್ದರಾಮಯ್ಯಗೆ CM ತಿರುಗೇಟು

ABOUT THE AUTHOR

...view details